ಶಿವಮೊಗ್ಗ / ತಾಲೂಕಿನ ಹಾರನಳ್ಳಿಯಲ್ಲಿ ಸಿಡಿಲು ಬಡಿದು ಕೋಳಿ ಫಾರಂ ಮಾಲೀಕರೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ರಾಮನಗರ ನಿವಾಸಿಯಾಗಿರುವ 47 ವರ್ಷದ ಮುಜೀಬ್ ಮೃತ ದುರ್ದೈವಿ.
ಮುಜೀಬ್ ಅವರು ತಮ್ಮ ಕೋಳಿ ಫಾರಂ ಅಂಗಡಿಯಲ್ಲಿದ್ದ ಸಂದರ್ಭದಲ್ಲಿಯೇ ಘಟನೆ ಸಂಭವಿಸಿದೆ. ಸಿಡಿಲು ಬಡಿದ ಬೆನ್ನಲ್ಲೆ ಮುಜೀಬ್ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಕೋಳಿ ಫಾರಂನಲ್ಲಿದ್ದ ಕೋಳಿಗಳು ಸಹ ಸಾವನ್ನಪ್ಪಿವೆ ಘಟನೆಗೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಇದೇ ವೇಳೆ ಶಿವಮೊಗ್ಗ ನಗರದ ಬೇರೆ ಬೇರೆ ಕಡೆಗಳಲ್ಲಿಯೂ ಸಿಡಿಲು ಬಡಿದ ಪ್ರಕರಣಗಳು ವರದಿಯಾಗಿವೆ.

ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.