ಅಲ್ಪಸಂಖ್ಯಾತರ ಕಡೆಗಣನೆ: ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತೇವೆ 

ದಾವಣಗೆರೆ | ದಾವಣಗೆರೆ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡದೆ ಕಾಂಗ್ರೆಸ್ ಪಕ್ಷ ಅನ್ಯಾಯ ಎಸಗಿದೆ ಎಂದು ರಾಜ್ಯ ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕ್ಷೇತ್ರದಲ್ಲಿ ಶೇ. 95 ರಷ್ಟು ಅಲ್ಪಸಂಖ್ಯಾತ ಮತದಾರರಿದ್ದರೂ ಸಮುದಾಯವನ್ನು ಕಡೆಗಣಿಸಿರುವುದು ರಾಜಕೀಯ ವಂಚನೆಯಾಗಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಸಯ್ಯದ್ ಮುಜಿಬುಲ್ಲಾ ಆರೋಪಿಸಿದ್ದಾರೆ. 

ಸಾಗರ: ಕೆಫೆ ಮಾಲೀಕನಿಂದ ಕಾರ್ಮಿಕನ ಹತ್ಯೆ; ಕಾರಿನೊಳಗೆ ಯುವಕನ ಶವ ಪತ್ತೆ!

ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಮುಜಿಬುಲ್ಲಾ, ಸಚಿವ ಜಮೀರ್ ಅಹಮದ್ ಮತ್ತು ಉಲೇಮಾಗಳು ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರು. ಆದರೆ, ಕಾಂಗ್ರೆಸ್ ನಾಯಕರು ಅವರ ಬೇಡಿಕೆಯನ್ನು ತಿರಸ್ಕರಿಸುವ ಮೂಲಕ ಅವಮಾನಿಸಿದ್ದಾರೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಪಕ್ಷದ ಮುಖಂಡರು ಈ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಕ್ಷಮೆ ಕೇಳದಿದ್ದರೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಕಾಂಗ್ರೆಸ್‌ಗೆ ಬುದ್ಧಿ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಎಂಎಲ್‌ಸಿ ಸ್ಥಾನಗಳ ಹಂಚಿಕೆ ಮತ್ತು ಅಭಿವೃದ್ಧಿ ಅನುದಾನ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಬಾಗಲಕೋಟೆಯಲ್ಲೂ ದಾವಣಗೆರೆಯಂತಹ ಪರಿಸ್ಥಿತಿಯೇ ನಿರ್ಮಾಣವಾಗಿದ್ದು, ಈ ಬಾರಿ ನಾವು ಯಾವುದೇ ಪಕ್ಷದ ಪರವಾಗಿಲ್ಲ, ಬದಲಿಗೆ ನೋಟಾ ಒತ್ತುವ ಮೂಲಕ ನಮ್ಮ ಪ್ರತಿರೋಧ ದಾಖಲಿಸುತ್ತೇವೆ ಎಂದು ಮುಜಿಬುಲ್ಲಾ ಸ್ಪಷ್ಟಪಡಿಸಿದರು. 

Davanagere By-Election Minority Forum Warns Congress

Davanagere By-Election Minority Forum Warns Congress
Davanagere By-Election Minority Forum Warns Congress
car decor