ನಗರದಲ್ಲಿ 2 ದಿನ ಕುಡಿಯುವ ನೀರಿನ ಪೂರೈಕೆ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shimoga City Water Water Supply Interruption Water Supply Interruption Drinking water
Shimoga City Water Water Supply Interruption Drinking water

ಶಿವಮೊಗ್ಗ : ನಗರದ ನಿವಾಸಿಗಳಿಗೆ ಕುಡಿಯುವ ನೀರು ಪೂರೈಸುವ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯಲಿದ್ದು, ಏಪ್ರಿಲ್ 4 ಮತ್ತು 5 ರಂದು ನಗರದಾದ್ಯಂತ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಮುನ್ನೆಚ್ಚರಿಕೆಯಾಗಿ ನೀರಿನ ಸಂಗ್ರಹ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ.

ಶಿವಮೊಗ್ಗ: ಶಾಲಾ ಬಸ್ ಹರಿದು 18 ತಿಂಗಳ ಮಗು ಸಾವು 

ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಸುವ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೆಸ್ಕಾಂ ವತಿಯಿಂದ ತುರ್ತು ದುರಸ್ತಿ ಮತ್ತು ನಿರ್ವಹಣಾ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕಾರಣದಿಂದಾಗಿ ಘಟಕಕ್ಕೆ ವಿದ್ಯುತ್ ಸ್ಥಗಿತಗೊಳ್ಳಲಿದ್ದು, ಪಂಪಿಂಗ್ ಕಾರ್ಯಕ್ಕೆ ಅಡಚಣೆಯಾಗಲಿದೆ. 

ಶನಿವಾರ ಮತ್ತು ಭಾನುವಾರ ನಗರದ ಬಹುತೇಕ ವಾರ್ಡ್‌ಗಳಲ್ಲಿ ನೀರಿನ ಪೂರೈಕೆಯಲ್ಲಿ ಏರುಪೇರಾಗಲಿದ್ದು, ಕೆಲವು ಪ್ರದೇಶಗಳಲ್ಲಿ ನೀರು ಸರಬರಾಜು ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಸಾರ್ವಜನಿಕರು ಲಭ್ಯವಿರುವ ನೀರನ್ನು ಮಿತವಾಗಿ ಬಳಸಿ, ಮಂಡಳಿಯೊಂದಿಗೆ ಸಹಕರಿಸಬೇಕೆಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ. 

ಸೋಮವಾರದಿಂದ ನೀರು ಪೂರೈಕೆ ಎಂದಿನಂತೆ ಸುಗಮವಾಗುವ ನಿರೀಕ್ಷೆಯಿದೆ. ಅಲ್ಲಿಯವರೆಗೆ ಅನಿವಾರ್ಯ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಾರ್ವಜನಿಕರು ಸಹಕರಿಸಲು ವಿನಂತಿಸಲಾಗಿದೆ.

Water Supply Interruption in Shimoga on April 4

Water Supply Interruption Water Supply Interruption Drinking water
Water Supply Interruption
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor