ತೀರ್ಥಹಳ್ಳಿ: ಬೈಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ; ಸವಾರನಿಗೆ ಗಂಭೀರ ಗಾಯ  

ಹಂಚಿಕೊಳ್ಳಿ
WhatsApp Facebook X Telegram
Thirthahalli Accident Rider Critically Injured
Thirthahalli Accident Rider Critically Injured

ತೀರ್ಥಹಳ್ಳಿ: ತಾಲೂಕಿನ ಕುಡುಮಲ್ಲಿಗೆ ಸಮೀಪದ ಹುಗುಳವಳ್ಳಿಯಲ್ಲಿ ನಿನ್ನೆ ಮಧ್ಯಾಹ್ನ ಖಾಸಗಿ ಬಸ್ ಹಾಗೂ ಬೈಕ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಶಿವಮೊಗ್ಗ: ಶಾಲಾ ಬಸ್ ಹರಿದು 18 ತಿಂಗಳ ಮಗು ಸಾವು

ಶುಕ್ರವಾರ ಮಧ್ಯಾಹ್ನ ಸುಮಾರು 3:30ರ ಸುಮಾರಿಗೆ ಈ ಘಟನೆ ನಡೆದಿದೆ. ವೇಗವಾಗಿ ಬಂದ ಬೈಕ್ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ.  ಇದರ ರಭಸಕ್ಕೆ, ಬೈಕ್ ಸಂಪೂರ್ಣವಾಗಿ ಬಸ್ಸಿನ ಕೆಳಭಾಗಕ್ಕೆ ನುಗ್ಗಿದ್ದು, ಇದರಿಂದಾಗಿ ಸವಾರನಿಗೆ ಗಂಬೀರವಾಗಿ ಗಾಯಗಳಾಗಿವೆ.

ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ಧಾವಿಸಿ ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಮಾಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹೆಚ್ಚಿನ ವಿವರ ತಿಳಿದುಬರಬೇಕಿದೆ.

Thirthahalli Accident Rider Critically Injured

Thirthahalli Accident Rider Critically Injured
Thirthahalli Accident Rider Critically Injured
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor