SHIVAMOGGA NEWS TODAY

ಶಿವಮೊಗ್ಗ : ಗ್ಯಾಸ್ ಟ್ರಬಲ್ ನಡುವೆ ಸಿಲಿಂಡರ್ ಕಳ್ಳತನ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಮದ್ಯಪ್ರಾಚ್ಯ ದೇಶಗಳ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮ ಎಲ್ಲೆಡೆ ಸಿಲಿಂಡರ್ ಅಭಾವ ತಲೆದೂರುತ್ತಿದೆ. ಪೂರೈಕೆ ಕಡಿಮೆಯಾಗಿ ಬೇಡಿಕೆ ಹೆಚ್ಚಿರುವುದರ ಸಂದರ್ಭದಲ್ಲಿ ಕಳ್ಳರು ತಮ್ಮ ಕೈಚಳಕವನ್ನು ತೋರಿಸುತ್ತಿದ್ದಾರೆ. ಅದರಂತೆ ಶಿವಮೊಗ್ಗ ಜಿಲ್ಲೆಯ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳರು ಅಂಗಡಿಯೊಂದಕ್ಕೆ ನುಗ್ಗಿ ಸಿಲಿಂಡರ್ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ಶಿವಮೊಗ್ಗ: ಏಪ್ರಿಲ್ 4 ರಂದು ನಗರದ ಹಲವೆಡೆ ವಿದ್ಯುತ್​ ವ್ಯತ್ಯಯ 

ಏಪ್ರಿಲ್​​ 04 ರಂದು ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿಯೊಂದರಲ್ಲಿ ರಾತ್ರಿ ವೇಳೆ ಗ್ಯಾಸ್ ಸಿಲಿಂಡರ್ ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಈ ಕುರಿತು ದೂರುದಾರರು ತಕ್ಷಣವೇ 112 ಪೊಲೀಸರಿಗೆ ಫೋನ್​ ಮಾಡಿದ್ದಾರೆ. 

ದೂರು ಸ್ವೀಕರಿಸಿದ ಕೂಡಲೇ ಕಾರ್ಯಪ್ರವೃತ್ತರಾದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು, ದೂರುದಾರರಿಂದ ಮಾಹಿತಿ ಸಂಗ್ರಹಿಸಿ ತನಿಖೆ ಆರಂಭಿಸಿದ್ದಾರೆ. 

ಸದ್ಯ ಪೊಲೀಸರು ಘಟನೆಯ ಸಂಪೂರ್ಣ ಮಾಹಿತಿಯನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದು, ದೂರು ದಾಖಲಿಸಲು ಸೂಚಿಸಿದ್ದಾರೆ.

Cylinder Theft in Shimoga Amid Gas Crisis

Cylinder Theft in Shimoga Amid Gas Crisis
Cylinder Theft in Shimoga Amid Gas Crisis
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.