ಹುಂಚದಲ್ಲಿ ಭೀಕರ ಅಗ್ನಿ ಅವಘಡ, ಕ್ಷಣಾರ್ಧದಲ್ಲಿ ಸುಟ್ಟು ಭಸ್ಮವಾದ ಮನೆ, ಮಹಿಳೆ ಅಸ್ವಸ್ಥ

ಹಂಚಿಕೊಳ್ಳಿ
WhatsApp Facebook X Telegram
Humcha House Gutted in Massive Fire
Humcha House Gutted in Massive Fire

ಹೊಸನಗರ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ಮಠದಜಡ್ಡು ಸಮೀಪವಿರುವ ಸುಮಿತ್ರಾ ಎಂಬುವವರ ಮನೆಯಲ್ಲಿ ಏಕಾಏಕಿ ಕಾಣಿಸಿಕೊಂಡ ಪರಿಣಾಮ ಮನೆ ಪೂರ್ತಿ ಸುಟ್ಟು ಭಸ್ಮವಾಗಿದೆ.

ಶಿವಮೊಗ್ಗ : ಗ್ಯಾಸ್ ಟ್ರಬಲ್ ನಡುವೆ ಸಿಲಿಂಡರ್ ಕಳ್ಳತನ 

ಬೆಂಕಿ ಕಾಣಿಸಿಕೊಂಡ ತಕ್ಷಣ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಬೆಂಕಿಯ ಜ್ವಾಲೆಯಿಂದಾಗಿ ಗೃಹೋಪಯೋಗಿ ವಸ್ತುಗಳು, ಪ್ರಮುಖ ದಾಖಲೆಗಳು ಹಾಗೂ ನಗದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಸ್ಥಳೀಯರು ತಕ್ಷಣವೇ ಸ್ಪಂದಿಸಿ ನೀರು ಹಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ, ಮನೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಘಟನೆಯ ನಂತರ ರಿಪ್ಪನ್‌ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಈ ದುರ್ಘಟನೆಯಿಂದ ತೀವ್ರ ಆಘಾತಕ್ಕೊಳಗಾದ ಮನೆಯ ಮಾಲಕಿ ಸುಮಿತ್ರಾ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಅಗ್ನಿ ಅವಘಡಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. 

Humcha House Gutted in Massive Fire

Humcha House Gutted in Massive Fire
Humcha House Gutted in Massive Fire
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor