ಬಸ್ ಟಿಕೆಟ್ ದರ ಏರಿಕೆ ವಿಚಾರದಲ್ಲಿ ಸರ್ಕಾರದ ದೊಡ್ಡ ಸ್ಟೇಟ್ಮೆಂಟ್​! ಇಲ್ಲಿದೆ ಗಮನಿಸಿ

ಹಂಚಿಕೊಳ್ಳಿ
WhatsApp Facebook X Telegram
shivamogga to bhadravati bus
shivamogga to bhadravati bus

ಬೆಂಗಳೂರು: ರಾಜ್ಯದಲ್ಲಿ ಇಂಧನ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರ ಏರಿಕೆ ಆಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿತ್ತು. ಅಲ್ಲದೆ ಈ ಬಗ್ಗೆ ಸಾಕಷ್ಟು ಚರ್ಚೆಗಳು ಸಹ ನಡೆದಿದ್ದವು. ಈ ಮಧ್ಯೆ ಸರ್ಕಾರ ಬಸ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದೆ.

ಬಸ್ ಟಿಕೆಟ್ ದರ ಏರಿಕೆ ಇಲ್ಲ

ಈ ಕುರಿತಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿರುವ ಸದ್ಯಕ್ಕೆ ಸರ್ಕಾರಿ ಸಾರಿಗೆ ಪ್ರಯಾಣದ ದರದಲ್ಲಿ ಏರಿಕೆಯಾಗುವುದಿಲ್ಲ, ಇನ್ನು ಆಟೋ ಗ್ಯಾಸ್ ಸೇರಿ ಪೆಟ್ರೋಲಿಯಂ ಉತ್ಪನ್ನಗಳ ಅಭಾವ ಸರಿಪಡಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದುತಿಳಿಸಿದರು.

ನಿನ್ನೆ ದಿನ ಸೋಮವಾರ ಸುದ್ದಿಗಾರರೊಂದಿಗೆಮಾತನಾಡುತ್ತಾ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸರ್ಕಾರಿ ಸಾರಿಗೆ ಬಸ್‌ಗಳಿಗೆ ಪೂರೈಸಲಾಗುತ್ತಿರುವ ಡೀಸೆಲ್ ಬೆಲೆಯಲ್ಲೂ ಹೆಚ್ಚಳವಾಗುತ್ತದೆ ಎಂಬ ಊಹಾ ಪೋಹಗಳಿದ್ದವು. ಅದಕ್ಕಾಗಿ ಸಿಎಂರಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಸಿ ಸಾರಿಗೆ ಬಸ್‌ ಗಳಿಗೆ ಪೂರೈಸಲಾಗುತ್ತಿರುವ ಡೀಸೆಲ್ ಬೆಲೆ ಹೆಚ್ಚಿಸದಂತೆ ಕೋರಲಾಗಿತ್ತು. ಇನ್ನು, ಯುದ್ದ ತಾತ್ಕಾಲಿಕವಾಗಿದ್ದು, ಆದರಿಂದ ಹೆಚ್ಚಿನ ಪರಿಣಾಮ ಬೀರುತ್ತಿಲ್ಲ. ಅಲ್ಲದೆ, ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ತಿಳಿಸಿದರು.

No Hike in Government Bus Fares for Now Transport Minister Ramalinga Reddy ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ
No Hike in Government Bus Fares for Now Transport Minister Ramalinga Reddy ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor