ಭದ್ರಾವತಿ ಕೋರ್ಟ್ ತೀರ್ಪು : ನೆರೆಮನೆಗೆ ನುಗ್ಗಿ ಹಲ್ಲೆ ಮಾಡಿದ್ದ ಆರೋಪಿಗೆ ಜೈಲು ಶಿಕ್ಷೆ!

ಹಂಚಿಕೊಳ್ಳಿ
WhatsApp Facebook X Telegram

ಭದ್ರಾವತಿ / ನಗರದ ಓಲ್ಡ್​ ಟೌನ್​ನಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಭದ್ರಾವತಿ ಕೋರ್ಟ್ ಆರೋಪಿಯೊಬ್ಬರಿಗೆ ಒಂದು ವರ್ಷ ಶಿಕ್ಷೆ ವಿಧಿಸಿದೆ. ನೆರೆಹೊರೆಯವರ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿ ಹಲ್ಲೆ ಹಾಗೂ ಜೀವಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ. ಭದ್ರಾವತಿಯ ಹಳೇನಗರ ವ್ಯಾಪ್ತಿಯ 1ನೇ ಕ್ರಾಸ್‌ನ ನಿವಾಸಿ 34 ವರ್ಷ ವಯಸ್ಸಿನ ಅಹ್ಮದ್ ಷರೀಫ್ ಶಿಕ್ಷೆಗೆ ಗುರಿಯಾದ ಆರೋಪಿ.

ಭದ್ರಾವತಿ ಕೋರ್ಟ್ ತೀರ್ಪು

ಈ ಕುರಿತು ಹೊರಬಿದ್ದಿರುವ ಪೊಲೀಸ್ ಪ್ರಕಟಣೆಯ ಪ್ರಕಾರ, ದಿನಾಂಕ 03-10-2021 ರಂದು ನಡೆದಿದ್ದ ಘಟನೆಯಲ್ಲಿ ಆರೋಪಿ ಅಹ್ಮದ್ ಷರೀಫ್ ತನ್ನ ಎದುರು ಮನೆಯಲ್ಲಿ ವಾಸವಿದ್ದ ಮಹಮ್ಮದ್‌ ಸಾಬ್‌ ಎಂಬುವವರ ನಿವಾಸಕ್ಕೆ ನುಗ್ಗಿ ಅವರ ಮೇಲೆ ಹಲ್ಲೆ ಮಾಡಿದ್ದ. ಈ ಸಂಬಂಧ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಐಪಿಸಿ 506, 504, 323, 307 ಹಾಗೂ 448 ರ ಅನ್ವಯ ಎಫ್ಐಆರ್ ದಾಖಲಾಗಿತ್ತು.

ಪ್ರಕರಣದ ಬಗ್ಗೆ ಅಂದಿನ ಪಿಎಸ್ಐ ಈರೇಶ್‌ ಚಾರ್ಜ್​ಶೀಟ್ ಸಲ್ಲಿಸಿದ್ದರು. ಕೋರ್ಟ್​ನಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ರತ್ನಮ್ಮ ಪಿ. ಅವರು ವಾದ ಮಂಡಿಸಿದ್ದರು. ವಿಚಾರಣೆ ಮುಗಿದು ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ತೀರ್ಪನ್ನು ಪ್ರಕಟಿಸಿದ್ದಾರೆ. ಅಪರಾಧಿ ಅಹ್ಮದ್ ಷರೀಫ್‌ಗೆ 01 ವರ್ಷಗಳ ಕಾಲ ಸಾಧಾ ಕಾರಾವಾಸದ ಜೈಲು ಶಿಕ್ಷೆ ಹಾಗೂ 2000 ರೂಪಾಯಿಗಳ ದಂಡವನ್ನು ವಿಧಿಸಿದ್ದಾರೆ.

Bhadravathi  Court verdict ಭದ್ರಾವತಿ ಕೋರ್ಟ್ ತೀರ್ಪು : ನೆರೆಮನೆಗೆ ನುಗ್ಗಿ ಹಲ್ಲೆ ಮಾಡಿದ್ದ ಆರೋಪಿಗೆ ಜೈಲು ಶಿಕ್ಷೆ!  4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 01 ವರ್ಷ ಜೈಲು ಶಿಕ್ಷೆ ವಿಧಿಸಿದೆ.
Bhadravathi Court verdict ಭದ್ರಾವತಿ ಕೋರ್ಟ್ ತೀರ್ಪು : ನೆರೆಮನೆಗೆ ನುಗ್ಗಿ ಹಲ್ಲೆ ಮಾಡಿದ್ದ ಆರೋಪಿಗೆ ಜೈಲು ಶಿಕ್ಷೆ!  4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 01 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor