ತೀರ್ಥಹಳ್ಳಿ: ತೀರ್ಥಹಳ್ಳಿ-ಆಗುಂಬೆ ಮಾರ್ಗದ ಕೌರಿಹಕ್ಲು ಸಮೀಪ ಸೋಮವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ನಿಲ್ಲಿಸದೇ ಪರಾರಿಯಾದ ಪರಿಣಾಮ, ದಯಾನಂದ ಪ್ರಭು (60) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಶಿವಮೊಗ್ಗ: ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋ*ಕ್ಸೋ ಸಂಕಷ್ಟ; 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್
ಮೃತರು ಗುಡ್ಡೆಕೇರಿ ಭಾಗದ ನಿವಾಸಿಯಾಗಿದ್ದು, ರಸ್ತೆ ದಾಟುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದರೂ ಸಹ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ.
ಪೊಲೀಸರ ತ್ವರಿತ ಕಾರ್ಯಾಚರಣೆಯಿಂದಾಗಿ ಅಪಘಾತಕ್ಕೆ ಕಾರಣವಾದ ಸೊರಬ ಮೂಲದ ಗ್ರಾಂಡ್ ಐ-10 ಕಾರನ್ನು ಪತ್ತೆ ಹಚ್ಚಲಾಗಿದ್ದು, ಸದ್ಯ ಪೊಲೀಸರು ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hit-and-Run 60-Year-Old Man Killed


