SHIMOGA NEWS LIVE

ಶಿವಮೊಗ್ಗ : ಆಟೋ LPG ಹಾಗೂ CNG  ಬಂಕ್​ಗಳಿಗೆ ಮಹತ್ವದ ಎಚ್ಚರಿಕೆ ನೀಡಿದ ಡಿ.ಸಿ ಪ್ರಭುಲಿಂಗ ಕವಳಿಕಟ್ಟಿ,ಏನದು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

DC Warning ಶಿವಮೊಗ್ಗ: ಜಿಲ್ಲೆಯಾದ್ಯಂತ ಇರುವ ಆಟೋ ಎಲ್‌ಪಿಜಿ ಮತ್ತು ಸಿಎನ್‌ಜಿ ಬಂಕ್‌ಗಳಲ್ಲಿ ಇಂಧನವನ್ನು ಸರ್ಕಾರ ಹಾಗೂ ತೈಲ ಕಂಪನಿಗಳು ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

ತೈಲ ಕಂಪನಿಗಳು ಅಥವಾ ಖಾಸಗಿ ಸಂಸ್ಥೆಗಳು ನಿಗದಿಪಡಿಸಿದ ದರದ ವಿವರವನ್ನು ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಕಾಣುವಂತೆ ಬಂಕ್‌ಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು.ಯಾವುದೇ ಕಾರಣಕ್ಕೂ ನಿಗದಿತ ದರಕ್ಕಿಂತ ಹೆಚ್ಚಿನ ಹಣವನ್ನು ಗ್ರಾಹಕರಿಂದ ಪಡೆಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಒಂದು ವೇಳೆ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವುದು ಕಂಡುಬಂದಲ್ಲಿ, ಅಂತಹ ಬಂಕ್ ಮಾಲೀಕರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ಮತ್ತು ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ರೆಗ್ಯುಲೇಷನ್ ಆಫ್ ಯೂಸ್ ಇನ್ ಮೋಟರ್ ವೆಹಿಕಲ್ಸ್) ಆರ್ಡರ್-2001 ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

DC Warning to LPG, CNG Bunks in Shivamogga

shivamogga car decor sun control house
shivamogga car decor sun control house

 

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.