ಸಾಗರ : ಮಂಗನ ಕಾಯಿಲೆಗೆ ವೃದ್ಧ ಬಲಿ

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

ಶಿವಮೊಗ್ಗ | ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಸಾಗರ ತಾಲೂಕಿನ ಗ್ರಾಮವೊಂದರ ವಯೋವೃದ್ಧರೊಬ್ಬರು ಇಂದು ಬೆಳಿಗ್ಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಶಿವಮೊಗ್ಗದಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಸಂಗೀತ ಸುಧೆ: ಎಲ್ಲಿ? ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

ವಯೋವೃದ್ದರೊಬ್ಬರು ಕಳೆದ ಕೆಲವು ದಿನಗಳಿಂದ ತೀವ್ರ ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದರು. ತಕ್ಷಣವೇ ಅವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ವೈದ್ಯರು ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ, ಅವರಿಗೆ ಮಂಗನ ಕಾಯಿಲೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. 

ಸೋಂಕಿನ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಅವರನ್ನು ಮಣಿಪಾಲ್‌ನ ಕಸ್ತೂರ್ಬಾ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ. 

ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಭಾಗಕ್ಕೆ ಹೋಗುವವರು ಜಾಗರೂಕರಾಗಿರಬೇಕು ಮತ್ತು ಜ್ವರ, ವಾಂತಿ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.

ವಿ,ಸೂ : ಸರ್ಕಾರದ ಆದೇಶದನ್ವಯ ಮಂಗನ ಕಾಯಿಲೆಗೆ ತುತ್ತಾದ ಯಾವುದೇ ವ್ಯಕ್ತಿ ಹಾಗೂ ಆತನ ಊರಿನ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುವಂತಿಲ್ಲ. 

KFD Alert 75-Year-Old Dies of Monkey Fever in Sagara

KFD Alert Collapse Canara Bank ತೀರ್ಥಹಳ್ಳಿ : ಬೈಕ್​ ತಗೊಂಡೋರು, ಕ್ಲಿಯರೆನ್ಸ್ ಲೆಟರ್​ ಕೇಳಿದ್ದಕ್ಕೆ ಏನೆಲ್ಲಾ ಆಯ್ತು ಓದಿ
KFD Alert
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor