POWER CUT TODAY

ಶಿವಮೊಗ್ಗ: ಏಪ್ರಿಲ್ 12 ರಂದು ನಗರದ ಹಲವೆಡೆ ಮತ್ತು ಗ್ರಾಮಾಂತರ ಪ್ರದೇಶಗ ಸೇರಿ 20 ಕ್ಕೂ ಹೆಚ್ಚು ಕಡೆ ವಿದ್ಯುತ್ ವ್ಯತ್ಯಯ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ:  ನಗರ ಮತ್ತು ಸುತ್ತಮುತ್ತಲಿನ ವಿವಿಧ ಪ್ರದೇಶಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಏಪ್ರಿಲ್ 12 ರಂದು  ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸಾರ್ವಜನಿಕರು ಈ ಕೆಳಗಿನ ವಿವರಗಳನ್ನು ಗಮನಿಸಿ ಸಹಕರಿಸಬೇಕಾಗಿ ಕೋರಲಾಗಿದೆ.

ಶಿವಮೊಗ್ಗ ಸುದ್ದಿಗಳು ಜಸ್ಟ್ ಮಿಸ್ ಮಾಡದೇ ಓದಿ

ನಗರ ಪ್ರದೇಶದ ವಿವರಗಳು

ನಗರದ ಉಪವಿಭಾಗ-1 ಮತ್ತು ಘಟಕ-2ರ ವ್ಯಾಪ್ತಿಯ ಉಷಾ ನರ್ಸಿಂಗ್ ಹೋಂ ವೃತ್ತದಲ್ಲಿ ರಸ್ತೆ ಅಗಲೀಕರಣಕ್ಕಾಗಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾರ್ಯ ನಡೆಯಲಿದೆ. ಈ ಕಾರಣದಿಂದಾಗಿ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2:00 ರವರೆಗೆ ವಿನಾಯಕನಗರ, ಹನುಮಂತನಗರ, ರವೀಂದ್ರನಗರ, ರಾಜೇಂದ್ರನಗರ, ಸವಳಂಗ ರಸ್ತೆ, ಉಷಾ ನರ್ಸಿಂಗ್ ಹೋಂ ಪರಿಸರ ಹಾಗೂ ಸುತ್ತಮುತ್ತಲಿನ ಓಣಿಗಳಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ. 

ಗ್ರಾಮಾಂತರ ಮತ್ತು ಕೈಗಾರಿಕಾ ಪ್ರದೇಶಗಳ ವಿವರಗಳು

ಮತ್ತೊಂದೆಡೆ, ಮಾಚೇನಹಳ್ಳಿ 110/11ಕೆವಿ ವಿತರಣಾ ಕೇಂದ್ರದ ಎಂಸಿಎಫ್-3 ಮತ್ತು ಎಂಸಿಎಫ್-20 ಮಾರ್ಗಗಳಲ್ಲಿ ತುರ್ತು ದುರಸ್ತಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಹೀಗಾಗಿ ಬೆಳಿಗ್ಗೆ 10:00 ರಿಂದ ಸಂಜೆ 6:00 ರವರೆಗೆ ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಜನತಾ ಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶಿವಪುರ ತಾಂಡಾ ಸೇರಿದಂತೆ ಹತ್ತಿರದ ಹಳ್ಳಿಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ. 

Power Cut Shutdown in Vinayakanagar, April 12

Power Cut Bhadravati Power Scheduled power cuts Power cut in Bhadravatipower Shikaripura  Power Outage july 27
Power Cut

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.