ಶಿವಮೊಗ್ಗ / ನ್ಯಾಯಾಲಯದ ವಿಚಾರಣೆಗೆ ಗೈರುಹಾಜರಾಗಿ 6 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಪತ್ತೆಹಚ್ಚುವಲ್ಲಿ ಜಯನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಶಿವಮೊಗ್ಗದ ವೆಂಕಟೇಶ್ ನಗರ ನಿವಾಸಿಯಾಗಿರುವ 30 ವರ್ಷದ ಜಾನ್ ಭರತ್ ಬಂಧಿತ ಆರೋಪಿ. ಈತನ ವಿರುದ್ಧ 2019 ರಲ್ಲಿ ಜಯನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 399 ಹಾಗೂ 402 ರ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿತ್ತು. ಆದರೆ, ಆರೋಪಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳಿಗೆ ಹಾಜರಾಗದೆ ಕಳೆದ 06 ವರ್ಷಗಳಿಂದ ತಲೆಮರೆಸಿಕೊಂಡಿದ್ದ.
ಆರೋಪಿ ಶಿವಮೊಗ್ಗದಲ್ಲಿ ಬಂಧನ : ಇಲ್ಲಿವರೆಗೂ ಏನೆಲ್ಲಾ ನಡೆಯಿತು
- ಈ ಹಿನ್ನೆಲೆ, ಶಿವಮೊಗ್ಗದ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಆರೋಪಿಯ ವಿರುದ್ಧ ದಸ್ತಗಿರಿ ವಾರೆಂಟ್ ಹೊರಡಿಸಿತ್ತು.
- ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಯನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರವಿಪಾಟೀಲ್ ಅವರ ನೇತೃತ್ವದಲ್ಲಿ, ಪಿಎಸ್ಐ ಕೋಮಲಾ, ಮುಖ್ಯ ಪೇದೆ ಚಂದ್ರು ಮತ್ತು ಪೊಲೀಸ್ ಪೇದೆ ಗಣೇಶ್ ಅವರನ್ನು ಒಳಗೊಂಡ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆಮಾಡಿದೆ.
- ಬಂಧಿತನನ್ನು 11/4/26 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.

