POWER CUT TODAY

ಶಿವಮೊಗ್ಗ: ಏಪ್ರಿಲ್ 15 ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ ನಗರದ ಕೆಲವು ಭಾಗಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಏಪ್ರಿಲ್ 15 ರಂದು ದಿನವಿಡೀ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂಪ್ರಕಟಣೆಯಲ್ಲಿ ತಿಳಿಸಿದೆ. 

ಶಿವಮೊಗ್ಗ : ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಲಾರಿ 

ಶಿವಮೊಗ್ಗ ನಗರ ಉಪವಿಭಾಗ-1 ಮತ್ತು ಘಟಕ-1ರ ವ್ಯಾಪ್ತಿಯ 11 ಕೆವಿ ಮಾರ್ಗದಲ್ಲಿ ವಿದ್ಯುತ್ ಪರಿವರ್ತಕಗಳನ್ನು ಸ್ಥಳಾಂತರಿಸುವ ಮಹತ್ವದ ಕಾಮಗಾರಿ ನಡೆಯಲಿದೆ. ಈ ಕಾರಣದಿಂದಾಗಿ ಅಂದು ಬೆಳಿಗ್ಗೆ 9:30 ರಿಂದ ಸಂಜೆ 6:00 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. 

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ವಿದ್ಯಾನಗರ ಮುಖ್ಯ ರಸ್ತೆ, ದುರ್ಗಮ್ಮನ ಬೀದಿ, ಜಗದಾಂಬ ಬೀದಿ ಜನರಲ್ ಹಾಸ್ಟೆಲ್ ಪ್ರದೇಶಗಳು ಹಾಗೂ ಸುತ್ತಮುತ್ತಲಿನ ಬಡಾವಣೆಗಳು. 

ಈ ಕಾಮಗಾರಿಯು ವ್ಯವಸ್ಥೆಯ ಸುಧಾರಣೆಗಾಗಿ ಅನಿವಾರ್ಯವಾಗಿದ್ದು, ಸಾರ್ವಜನಿಕರು ಮತ್ತು ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

Power Cut Areas Affected on April 15

Shimoga Power Cut Power Outage in Shivamogga
Shimoga Power Cut  

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.