ಅಣ್ಣಾ ನಗರದಲ್ಲಿ ಅಂಬ್ರೋಸ್ ಅರೆಸ್ಟ್…ಪೊಲೀಸರ ಕಾರ್ಯಾಚರಣೆ ಯಲ್ಲಿ ಸಿಕ್ತು ಭಾರೀ ಮಾಲು

ಕೊನೆಯ ನವೀಕರಣ: 14 ಏಪ್ರಿಲ್ 2026, 6:53 ಫೂರ್ವಾಹ್ನ

ಹಂಚಿಕೊಳ್ಳಿ
WhatsApp Facebook X Telegram
ನಗರದ ಅಣ್ಣಾನಗರ ಚಾನಲ್ ಏರಿಯಾದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಅಣ್ಣಾನಗರ ಚಾನಲ್ ಏರಿಯಾದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ (ಪಿಐ), ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ (ಪಿಎಸ್‌ಐ) ಹಾಗೂ ಸಿಬ್ಬಂದಿಗಳ ತಂಡ ಈ ದಾಳಿಯಲ್ಲಿ ಪಾಲ್ಗೊಂಡಿತ್ತು. ನಡೆಸಿದೆ. ದಾಳಿಯ ವೇಳೆ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಅಣ್ಣಾ ನಗರದಲ್ಲಿ ಅಂಬ್ರೋಸ್ ಅರೆಸ್ಟ್

ಬಂಧಿತ ಆರೋಪಿಯನ್ನು ಶಿವಮೊಗ್ಗದ ಚಿಕ್ಕಲ್ ನಿವಾಸಿ 50 ವರ್ಷದ ಮಹಮ್ಮದ್ ಅಂಬ್ರೋಸ್ ಎಂದು ಗುರುತಿಸಲಾಗಿದೆ. ಈತನಿಂದ ಬರೋಬ್ಬರಿ 85,000 ರೂಪಾಯಿ ಮೌಲ್ಯದ 1 ಕೆಜಿ 720 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಬಂಧಿತ ಆರೋಪಿಯ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ  ಎನ್‌ಡಿಪಿಎಸ್ (NDPS) ಕಾಯ್ದೆಯ ಕಲಂ 20(b) (ii) B ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ಈ ಜಾಲದ ಕುರಿತು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.

ನಗರದ ಅಣ್ಣಾನಗರ ಚಾನಲ್ ಏರಿಯಾದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಅಣ್ಣಾನಗರ ಚಾನಲ್ ಏರಿಯಾದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor