5 ದಿನ ಬಿಸಿಗಾಳಿ! ಹಲವೆಡೆ ಯುಲ್ಲೋ ಅಲರ್ಟ್!ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಮಳೆ!

Published: 16 ಏಪ್ರಿಲ್ 2026, 7:05 ಫೂರ್ವಾಹ್ನ • 1 min read
✨ AI ಓವರ್‌ವ್ಯೂ (ಮುಖ್ಯಾಂಶ)

ಶಿವಮೊಗ್ಗವೂ ಸೇರಿದಂತೆ ರಾಜ್ಯದೆಲ್ಲೆಡೆ ಇವತ್ತಿನಿಂದ ಐದು ದಿನ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಹೇಳಿದೆ. ಜತೆಗೆ, ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 5 ದಿನ ಬಿಸಿಗಾಳಿ ಉತ್ತರ ಒಳನಾಡಿನ ಬೀದ‌ರ್, ಕಲಬುರಗಿ, ಯಾದಗಿರಿ, ರಾಯಚೂರು. ವಿಜಯಪುರ, ಗದಗ, ಧಾರವಾಡ, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಿಗೆ…

ಶಿವಮೊಗ್ಗವೂ ಸೇರಿದಂತೆ ರಾಜ್ಯದೆಲ್ಲೆಡೆ ಇವತ್ತಿನಿಂದ ಐದು ದಿನ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಹೇಳಿದೆ. ಜತೆಗೆ, ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

5 ದಿನ ಬಿಸಿಗಾಳಿ

ಉತ್ತರ ಒಳನಾಡಿನ ಬೀದ‌ರ್, ಕಲಬುರಗಿ, ಯಾದಗಿರಿ, ರಾಯಚೂರು. ವಿಜಯಪುರ, ಗದಗ, ಧಾರವಾಡ, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಐದು ದಿನಗಳು ‘ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಂಭವವಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಇತ್ತ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಬಿಸಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ

ಈ ನಡುವೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಯ ಒಂದೆರಡು ಕಡೆ ಗುರುವಾರದಿಂದ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಮುಂದಿನ 2 ದಿನಗಳಲ್ಲಿ 37 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದಿದೆ.

Karnataka Weather Update: Heatwave Yellow Alert5 ದಿನ ಬಿಸಿಗಾಳಿ! ಹಲವೆಡೆ ಯುಲ್ಲೋ ಅಲರ್ಟ್!ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಮಳೆ!
Karnataka Weather Update: Heatwave Yellow Alert5 ದಿನ ಬಿಸಿಗಾಳಿ! ಹಲವೆಡೆ ಯುಲ್ಲೋ ಅಲರ್ಟ್!ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಮಳೆ!


ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

END OF STORY

ajjimane ganesh

Senior Journalist | Malenadu Today
✓ Verified Journalist