24 ವರ್ಷದ ಯುವಕ ಸೇರಿ ಐವರಿಗೆ ಲಕ್ಷಾಂತರ ರೂಪಾಯಿ ದಂಡ, ಜೈಲು ಶಿಕ್ಷೆ, ಅಂತದ್ದೇನು ಮಾಡಿದ್ರು?

ಭದ್ರಾವತಿ: ಮಹಿಳೆಯೊಬ್ಬರ ಮನೆಗೆ ನುಗ್ಗಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಎರಡು ವರ್ಷಗಳ ಕಠಿಣ ಕಾರಾವಾಸ ಹಾಗೂ ತಲಾ 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. 

ಶಿವಮೊಗ್ಗ-ಬೆಂಗಳೂರು ವಿಮಾನ ಸ್ಥಗಿತ : ಸಚಿವರಿಗೆ ಬಿ.ವೈ. ರಾಘವೇಂದ್ರ ಪತ್ರ

Bhadravathi ಘಟನೆಯ ಹಿನ್ನೆಲೆ

ಜೂನ್ 06, 2023ರಂದು ರಾತ್ರಿ ಅಂತರಗಂಗೆ ಗ್ರಾಮದ ನಿವಾಸಿಗಳಾದ ನವೀನ (25), ಮನು (31), ಸಂತೋಷ ಕೆ (31), ಮಂಜುನಾಥ ವಿ (33) ಹಾಗೂ ಅಭಿಷೇಕ್ (24) ಎಂಬುವವರು ಅದೇ ಗ್ರಾಮದ ರಾಧಾ ಎಂಬುವವರ ಮನೆಗೆ ಅಕ್ರಮವಾಗಿ ನುಗ್ಗಿದ್ದರು. ಈ ವೇಳೆ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ನಿಂದಿಸಿರುವುದಲ್ಲದೆ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿದ್ದರು. ಈ ಕುರಿತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

 ಎಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜಕಿ ರತ್ನಮ್ಮ ಪಿ. ಅವರು ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು, ಆರೋಪಿಗಳ ಮೇಲಿನ ಅಪರಾಧ ದೃಢಪಟ್ಟ ಹಿನ್ನೆಲೆಯಲ್ಲಿ ಐವರಿಗೂ ತಲಾ 2 ವರ್ಷ ಜೈಲು ಶಿಕ್ಷೆ ಹಾಗೂ ಒಟ್ಟು 1,00,000 ರೂಪಾಯಿ ದಂಡ ವಿಧಿಸಿ ಆದೇಶಿಸಿದ್ದಾರೆ.

Bhadravathi Court Sentences Five to Jail

Bhadravathi Court Sentences Five to Jail
Bhadravathi Court Sentences Five to Jail
shivamogga car decor sun control house
shivamogga car decor sun control house