ಶಿವಮೊಗ್ಗ : ಮಂಗನ ಕಾಯಿಲೆ ಭೀತಿ: ಆರೋಗ್ಯ ಇಲಾಖೆಯಿಂದ ತುರ್ತು ಮಾರ್ಗಸೂಚಿ ಪ್ರಕಟ

Published: 17 ಏಪ್ರಿಲ್ 2026, 3:10 ಅಪರಾಹ್ನ IST • 1 min read

ಶಿವಮೊಗ್ಗ: ಜಿಲ್ಲೆಯ ಮಲೆನಾಡು ಭಾಗಗಳಾದ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆ (KFD) ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ತೀವ್ರ ಜಾಗೃತಿ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಟರಾಜ್ ಕೆ.ಎಸ್. ಅವರು ತುರ್ತು ಸೂಚನೆ ನೀಡಿದ್ದಾರೆ. 

ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ಆಸೀಫ್ ಖಾನ್ ಬಂಧನ; ವಶಪಡಿಸಿಕೊಂಡ ಮಾಲ್​​ ಎಷ್ಟು ಗೊತ್ತಾ,,?

ತೀರ್ಥಹಳ್ಳಿಯ ಅರಳಸುರುಳಿ, ಮೇಗರವಳ್ಳಿ, ಹೊಸನಗರದ ಸೊನಲೆ, ರಿಪ್ಪನ್‌ಪೇಟೆ ಹಾಗೂ ಸಾಗರದ ತಾಳಗುಪ್ಪ ವ್ಯಾಪ್ತಿಯ ಹಿರೇಮನೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಕಾಯಿಲೆ ಕಾಣಿಸಿಕೊಂಡಿದೆ. ಜ್ವರ, ತಲೆನೋವು ಅಥವಾ ಮೈಕೈ ನೋವು ಕಂಡುಬಂದಲ್ಲಿ ನಿರ್ಲಕ್ಷಿಸದೇ ತಕ್ಷಣ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.

ಕಾಡಿಗೆ ಅಥವಾ ತೋಟಕ್ಕೆ ಹೋಗುವವರು ಕಡ್ಡಾಯವಾಗಿ ಡಿಪಾ ತೈಲ ಹಚ್ಚಿಕೊಳ್ಳಬೇಕು ಮತ್ತು ಸದ್ಯದ ಪರಿಸ್ಥಿತಿಯಲ್ಲಿ ಕಾಡಿನ ಒಣ ಎಲೆಗಳನ್ನು (ದರಗು) ಸಂಗ್ರಹಿಸುವುದನ್ನು ನಿಲ್ಲಿಸಬೇಕು. ಒಂದು ವೇಳೆ ಮಂಗಗಳು ಅಸಹಜವಾಗಿ ಮೃತಪಟ್ಟಿರುವುದು ಕಂಡುಬಂದಲ್ಲಿ ತಕ್ಷಣ ಅರಣ್ಯ ಅಥವಾ ಪಶುಸಂಗೋಪನಾ ಇಲಾಖೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ. 

ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಡಿಹೆಚ್‌ಒ, ಜ್ವರದ ಲಕ್ಷಣವಿರುವವರಿಗೆ ಕೇವಲ ನೋವು ನಿವಾರಕಗಳನ್ನು ನೀಡಿ ಕಳುಹಿಸಬಾರದು. ಕೂಡಲೇ ಸರ್ಕಾರಿ ಆಸ್ಪತ್ರೆಗೆ ಮಾಹಿತಿ ನೀಡಿ ರಕ್ತ ಪರೀಕ್ಷೆಗೆ ಶಿಫಾರಸು ಮಾಡಬೇಕು ಎಂದು ತಿಳಿಸಿದ್ದಾರೆ. ಮಂಗನ ಕಾಯಿಲೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಲಭ್ಯವಿದೆ.

Shivamogga KFD Alert Health Guidelines Issued

Shivamogga KFD Alert Health Guidelines Issued
Shivamogga KFD Alert Health Guidelines Issued
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY

Ganesh Ajjimane

Senior Journalist | Malenadu Today
✓ Verified Journalist

Authority

Published by: Malenadu Today Editorial Desk
✓ Fact Checked   ✓ Updated   Editorial Policy