ಶಿವಮೊಗ್ಗ : ರಾಜ್ಯದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ ಖಾಲಿ ಇರುವ ವೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಅಲ್ಲಿಯವರೆಗೆ ತಾತ್ಕಾಲಿಕ ವ್ಯವಸ್ಥೆಯಾಗಿ ಮಾಜಿ ಸೈನಿಕರನ್ನು ನೇಮಿಸಿಕೊಳ್ಳಲು ಸರ್ಕಾರ ಮುಂದಾಗಿದೆ.
ಶಿವಮೊಗ್ಗ: ಏಪ್ರಿಲ್ 19 ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಈ ಯೋಜನೆಯಡಿ ಒಟ್ಟು 11 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಿವಮೊಗ್ಗ ಮಾತ್ರವಲ್ಲದೆ ನೆರೆಯ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ಮಾಜಿ ಸೈನಿಕರಿಗೂ ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಆಸಕ್ತಿಯಿರುವ ಮಾಜಿ ಸೈನಿಕರು ತಮ್ಮ ಸಂಪೂರ್ಣ ವಯೋಮಿತಿ, ಅನುಭವ ಮತ್ತು ವೈಯಕ್ತಿಕ ವಿವರಗಳನ್ನು ಒಳಗೊಂಡ ಲಿಖಿತ ಅರ್ಜಿಯನ್ನು ಸಿದ್ಧಪಡಿಸಿಕೊಂಡು ಏಪ್ರಿಲ್ 24ರ ಒಳಗಾಗಿ ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಸಲ್ಲಿಸಬೇಕು.
ಈ ಕುರಿತು ಮಾಹಿತಿ ನೀಡಿರುವ ಉಪ ನಿರ್ದೇಶಕರಾದ ಡಾ. ಸಿ.ಎ. ಹಿರೇಮಠ ಅವರು, ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ 08182-220925 ಸಂಖ್ಯೆಗೆ ಕರೆ ಮಾಡಬಹುದು ಅಥವಾ [email protected] ಇಮೇಲ್ ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
Karnataka Prison Department Recruitment 2026

Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.