ಏ.29, ಮೇ 4, 6 ರಂದು ಮೈಸೂರು-ತಾಳಗುಪ್ಪ ಸೇರಿ ಹಲವು ರೈಲುಗಳ ಸಂಚಾರ ರದ್ದು! ಯಾವೆಲ್ಲಾ ರೈಲುಗಳು ಗಮನಿಸಿ

ರೈಲ್ವೆ ಇಲಾಖೆ ಕಾಮಗಾರಿಳನ್ನು ಕೈಗೊಂಡಿರುವ ಹಿನ್ನೆಲೆ, ಮುಂಬರುವ ಏಪ್ರಿಲ್ 29, ಮೇ 4 ಹಾಗೂ ಮೇ 6 ರಂದು ಪ್ರಮುಖ ಮಾರ್ಗಗಳಲ್ಲಿ ಸಂಚರಿಸುವ ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಪ್ರಕಟಣೆ ನೀಡಿದೆ. ಆ ಬಗೆಗಿನ ಮಾಹಿತಿ ಇಲ್ಲಿದೆ

ಮೇಲ್ಕಂಡ ದಿನಾಂಗಳಂದು ಒಟ್ಟು ಮೂರು ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಉಳಿದಂತೆ ಎರಡು ರೈಲುಗಳ ಸೇವೆಯನ್ನು ಭಾಗಶಃ ಮೊಟಕುಗೊಳಿಸಲಾಗಿದೆ ಹಾಗೂ ಒಂದು ರೈಲು ವಿಳಂಬವಾಗಿ ಸಂಚರಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರೈಲುಗಳ ಸಂಚಾರ ರದ್ದು!

  • ಪ್ರಯಾಣಿಕರ ದೈನಂದಿನ ಓಡಾಟಕ್ಕೆ ಅನುಕೂಲವಾಗಿದ್ದ ಪ್ರಮುಖ ರೈಲುಗಳ ಸೇವೆ ಸ್ಥಗಿತಗೊಳ್ಳಲಿದೆ.
  • ರೈಲು ಸಂಖ್ಯೆ 16206 ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 16205 ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ಹಾಗೂ ರೈಲು ಸಂಖ್ಯೆ 56267 ಅರಸೀಕೆರೆ-ಮೈಸೂರು ಪ್ಯಾಸೆಂಜರ್ ರೈಲುಗಳು 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ಸಂಪೂರ್ಣವಾಗಿ ರದ್ದಾಗಲಿವೆ.
  • ಈ ದಿನಗಳಲ್ಲಿ ಸದರಿ ಮಾರ್ಗದಲ್ಲಿ ಪ್ರಯಾಣಿಸುವವರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ.

ಮೈಸೂರು-ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ಭಾಗಶಃ ರದ್ದು

ಇದೇ ಅವಧಿಯಲ್ಲಿ ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 16225 ಮೈಸೂರು-ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು ಮೈಸೂರು ಹಾಗೂ ಅರಸೀಕೆರೆ ನಿಲ್ದಾಣಗಳ ನಡುವೆ ತನ್ನ ಸೇವೆಯನ್ನು ಸ್ಥಗಿತಗೊಳಿಸಲಿದೆ. ಆದರೆ, ಈ ರೈಲು ಅರಸೀಕೆರೆ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಸರಿಯಾಗಿ ಶಿವಮೊಗ್ಗದ ಕಡೆಗೆ ಪ್ರಯಾಣವನ್ನು ಆರಂಭಿಸಲಿದೆ.

ಅದೇ ರೀತಿ, ರೈಲು ಸಂಖ್ಯೆ 56266 ಮೈಸೂರು-ಅರಸೀಕೆರೆ ಪ್ಯಾಸೆಂಜರ್ ರೈಲು ಸೇವೆಯು ಮಾವಿನಕೆರೆ ಮತ್ತು ಅರಸೀಕೆರೆ ನಡುವೆ ರದ್ದಾಗಲಿದ್ದು, ಈ ರೈಲು ಮೈಸೂರಿನಿಂದ ಹೊರಟು ಮಾವಿನಕೆರೆ ನಿಲ್ದಾಣದಲ್ಲೇ ತನ್ನ ಪ್ರಯಾಣವನ್ನು ಅಂತ್ಯಗೊಳಿಸಲಿದೆ.

ಇನ್ನೂ ಕರಾವಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರೈಲು ಸೇವೆ ಕೂಡ ತಡವಾಗಲಿದೆ. ರೈಲು ಸಂಖ್ಯೆ 16515 ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್ ರೈಲು ಇದೇ ದಿನಾಂಕಗಳಂದು (2026 ಏಪ್ರಿಲ್ 29, ಮೇ 4 ಮತ್ತು ಮೇ 6) ವಿಳಂಬವಾಗಿ ಸಂಚರಿಸಲಿದೆ.

ಈ ರೈಲು ಬೆಂಗಳೂರು ವಿಭಾಗದ ವ್ಯಾಪ್ತಿಯಲ್ಲಿ ಅಂದಾಜು 65 ನಿಮಿಷಗಳಷ್ಟು ತಡವಾಗಿ ತನ್ನ ಪ್ರಯಾಣವನ್ನು ಮುಂದುವರಿಸಲಿದೆ ಎಂದು ಮಾಹಿತಿ ನೀಡಲಾಗಿದೆ.

ಏಪ್ರಿಲ್ 29, ಮೇ 4, 6 ರಂದು ಮೈಸೂರು-ತಾಳಗುಪ್ಪ ಸೇರಿ ಹಲವು ರೈಲುಗಳ ಸಂಚಾರ ರದ್ದು! ಯಾವೆಲ್ಲಾ ರೈಲುಗಳು ಗಮನಿಸಿTrain Services Disrupted: Mysuru-Talaguppa, Arsikere Trains Cancelled on April 29, May 4 & 6
ಏಪ್ರಿಲ್ 29, ಮೇ 4, 6 ರಂದು ಮೈಸೂರು-ತಾಳಗುಪ್ಪ ಸೇರಿ ಹಲವು ರೈಲುಗಳ ಸಂಚಾರ ರದ್ದು! ಯಾವೆಲ್ಲಾ ರೈಲುಗಳು ಗಮನಿಸಿTrain Services Disrupted: Mysuru-Talaguppa, Arsikere Trains Cancelled on April 29, May 4 & 6

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw