ಸಾಲ ನೀಡದಿದ್ದಕ್ಕೆ ಕಲ್ಲಿನಿಂದ ಹಲ್ಲೆ ಮಾಡಿದ ಭೂಪ, ಆಮೇಲೆ ಏನಾಯ್ತು..?

ಭದ್ರಾವತಿ : ಅಂಗಡಿಯಲ್ಲಿ ಸಾಲ ನೀಡಲಿಲ್ಲ ಎಂಬ ಕಾರಣಕ್ಕಾಗಿ ಮದ್ಯಪಾನ ಮಾಡಿದ್ದ ವ್ಯಕ್ತಿಯೊಬ್ಬ ಅಂಗಡಿ ಮಾಲೀಕರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿರುವ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಶಿವಮೊಗ್ಗ : ಬಟ್ಟೆ ವ್ಯಾಪಾರಿಗೆ ಲಾಂಗ್ ತೋರಿಸಿ ಹಣ ಸುಲಿಗೆ, ಪ್ರಕರಣ ದಾಖಲು

ಘಟನೆಯ ವಿವರ:

 ಏಪ್ರಿಲ್​​ 24 ರಂದು  ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮದ್ಯಪಾನ ಮಾಡಿದ್ದ ವ್ಯಕ್ತಿಯೊಬ್ಬ ಅಂಗಡಿಯ ಮಾಲೀಕನ ಬಳಿ ಬಂದು ಸಾಲ ಕೇಳಿದ್ದಾನೆ. ಆದರೆ ಅಂಗಡಿಯವರು ಸಾಲ ನೀಡಲು ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ವ್ಯಕ್ತಿಯು ಗಲಾಟೆ ನಡೆಸಿ, ಮಾಲೀಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. 

ಈ ಕುರಿತು ದೂರುದಾರರು ತಕ್ಷಣವೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಇಆರ್‌ವಿ ಸಿಬ್ಬಂದಿಗಳು ಘಟನೆಯ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಹಲ್ಲೆ ನಡೆಸಿ ಓಡಿಹೋದ ವ್ಯಕ್ತಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು, ದೂರುದಾರರಿಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಬಂದು ಅಧಿಕೃತ ದೂರು ನೀಡುವಂತೆ ಸೂಚಿಸಿದ್ದಾರೆ. 

Bhadravathi Assault Drunk Man Attacks Shopkeeper

Bhadravathi Assault Drunk Man Attacks Shopkeeper
Bhadravathi Assault Drunk Man Attacks Shopkeeper