ಆನಂದಪುರದಲ್ಲಿ ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು, ಸವಾರ ಪರಾರಿ

ಆನಂದಪುರ: ಸಾಗರ ತಾಲೂಕಿನ ಆನಂದಪುರದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ, ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತೋಳಿಕಲ್ ಶೇಖರಪ್ಪ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.

indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು

ಘಟನೆಯ ವಿವರ

ಆನಂದಪುರದ ಸರ್ಕಾರಿ ಆಸ್ಪತ್ರೆಯ ಮುಂಭಾಗದ  ರಸ್ತೆಯಲ್ಲಿ ಶೇಕರಪ್ಪ ಮಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ಅಪರಿಚಿತ ಬೈಕ್ ಸವಾರ ಹಿಂಬದಿಯಿಂದ ಜೋರಾಗಿ ಗುದ್ದಿದ್ದಾನೆ. ಡಿಕ್ಕಿಯ ರಭಸಕ್ಕೆ ಶೇಖರಪ್ಪ ಅವರಿಗೆ ಗಂಭೀರ ಗಾಯಗಳಾಗಿ ತೀವ್ರ ರಕ್ತಸ್ರಾವವಾಗಿತ್ತು. 

ಕೂಡಲೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ  ಚಿಕಿತ್ಸೆ ಫಲಕಾರಿಯಾಗದೆ ಶೇಖರಪ್ಪ ಅವರು ಕೊನೆಯುಸಿರೆಳೆದಿದ್ದಾರೆ. 

ಅಪಘಾತ ಸಂಭವಿಸಿದ ತಕ್ಷಣವೇಬೈಕ್ ಸವಾರ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಆನಂದಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದ ಸವಾರನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Pedestrian Killed in Bike Hit-and-Run

Pedestrian Killed in Bike Hit-and-Run
Pedestrian Killed in Bike Hit-and-Run