ರೈತ ನಾಯಕ ಬಿ.ಎಸ್. ಯಡಿಯೂರಪ್ಪನವರ ರಾಜಕೀಯ ಜೀವನಕ್ಕೆ 50 ವರ್ಷ: ಮೇ 9ಕ್ಕೆ ಚಿತ್ರದುರ್ಗದಲ್ಲಿ ‘ಅಭಿಮಾನೋತ್ಸವ’ದ ಸಂಭ್ರಮ! 🚩
ಮಾಜಿ ಸಿ ಎಂ ರೈತ ನಾಯಕ ಬಿ.ಎಸ್. ಯಡಿಯೂರಪ್ಪನವರು ಸಾರ್ವಜನಿಕ ಜೀವನಕ್ಕೆ ಪಾದಾರ್ಪಣೆ ಮಾಡಿ 50 ವಸಂತಗಳು ಕಳೆದಿವೆ. ಈ ಐತಿಹಾಸಿಕ ಮೈಲಿಗಲ್ಲನ್ನು ಸಂಭ್ರಮಿಸಲು ಮೇ 09 ರಂದು ಚಿತ್ರದುರ್ಗದಲ್ಲಿ ಬೃಹತ್ ಅಭಿಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕುರಿತು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಮಾಹಿತಿ ನೀಡಿದ್ದು, “ಬಿಎಸ್ವೈ ಅವರ ಸುದೀರ್ಘ ರಾಜಕೀಯ ಹೋರಾಟದ ಹಾದಿಯನ್ನು ಗೌರವಿಸಲು ಈ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ದೇಶದ ಪ್ರಮುಖ ಗಣ್ಯರು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
#BSYediyurappa, #BSY50, #Abhimanotsava, #Chitradurga, #BYRaghavendra, #AmitShah, #KarnatakaPolitics, #RaithaNayaka, #BJPKarnataka, #Shivamogga, #MalnadToday, #GoldenJubilee, #LegendaryLeader
