5- 10 ರೂಪಾಯಿಗೂ ಪ್ರತಿಭಟನೆ ನಡೆಸ್ತಿದ್ರು : ಸಚಿವ ಬೈರತಿ ಸುರೇಶ್
ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ವಿಚಾರವಾಗಿ ಶಿವಮೊಗ್ಗದಲ್ಲಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜಾತಿ ಜನಾಂಗಗಳ ನಡುವೆ ಭಿನ್ನಾಭಿಪ್ರಾಯ ಮೂಡಿಸುವ ಕೆಲಸ ಮಾಡುತ್ತಿರುವ ಕೇಂದ್ರ ಸರ್ಕಾರವು ಲೋಕಸಭಾ ಚುನಾವಣೆ ಮುಕ್ತಾಯಗೊಳ್ಳುತ್ತಿದ್ದಂತೆಯೇ ಏಕಾಏಕಿ ಗ್ಯಾಸ್ ಸಿಲಿಂಡರ್ ದರವನ್ನು ಹೆಚ್ಚಳ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ಸಿಲಿಂಡರ್ ಬೆಲೆಯಲ್ಲಿ ಕೇವಲ 5 ಅಥವಾ 10 ರೂಪಾಯಿಗಳಷ್ಟು ಏರಿಕೆಯಾದಾಗಲೂ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಜನತಾ ಪಾರ್ಟಿಯ ಮುಖಂಡರು, ಈಗ ಈ ರೀತಿಯಾಗಿ ಭಾರೀ ಪ್ರಮಾಣದಲ್ಲಿ ದರ ಹೆಚ್ಚಿಸಿದರೆ ಬಡ ವರ್ಗದ ಜನರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವುದರಿಂದ ಜನರು ಆರ್ಥಿಕವಾಗಿ ಕೊಂಚ ಸುಧಾರಿಸಿಕೊಳ್ಳುವಂತಾಗಿದೆ.
ಆದರೆ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅಲ್ಲಿನ ಜನಸಾಮಾನ್ಯರ ಪರಿಸ್ಥಿತಿಯು ದೇವರಿಗೇ ಪ್ರೀತಿಯಾಗಬೇಕು ಎಂದು ಲೇವಡಿ ಮಾಡಿದರು. ರಾಜ್ಯದಲ್ಲಿ ಇತ್ತೀಚೆಗೆ ಆಗಿರುವ ವಿದ್ಯುತ್ ದರ ಏರಿಕೆಗೂ ಕೇಂದ್ರ ಸರ್ಕಾರವೇ ನೇರ ಕಾರಣವಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಕೇಂದ್ರವು ಹೆಚ್ಚಳ ಮಾಡಿದರೆ, ಅದರ ನೇರ ಪರಿಣಾಮವಾಗಿ ಸಹಜವಾಗಿಯೇ ವಿದ್ಯುತ್ ಉತ್ಪಾದನೆ ಮತ್ತು ಪೂರೈಕೆ ದರವೂ ಹೆಚ್ಚಳವಾಗುತ್ತದೆ ಎಂದು ಅವರು ಸಮರ್ಥಿಸಿಕೊಂಡರು.
BS Suresh in Shivamogga, MLA SN Channabasappa, Karnataka Politics, Shivamogga News, Minister BS Suresh, Political Conversation, #ShivamoggaPolitics #BSSuresh #SNChannabasappa #DevelopmentPolitics #Bommanakatte #ShivamoggaUpdates #PoliticalCamaraderie #Trend #ViralPolitics
