ಜೂನ್ ಮೊದಲ ವಾರದಲ್ಲಿ , ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಬಿಗ್​ ಅಪ್​ಡೇಟ್


ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ಸೋಗಾನೆ ಬಳಿ ಇರುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರಗತಿಯಲ್ಲಿರುವ ರಾತ್ರಿ ವೇಳೆ ವಿಮಾನ ಇಳಿಯಲು ಅನುಕೂಲವಾಗುವ (ನೈಟ್ ಲ್ಯಾಂಡಿಂಗ್) ಕಾಮಗಾರಿಯು ಜೂನ್ ತಿಂಗಳ ಮೊದಲ ವಾರದಲ್ಲಿ ಸಂಪೂರ್ಣವಾಗಿ ಮುಕ್ತಾಯಗೊಳ್ಳಲಿದೆ ಎಂದು ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಮಂಡಳಿಯ (ಕೆಎಸ್‌ಐಐಡಿಸಿ) ಅಧ್ಯಕ್ಷ ನಂಜಯ್ಯ ಮಠ್​ ಅವರು ತಿಳಿಸಿದ್ದಾರೆ.

ಇವತ್ತು ಶನಿವಾರ, ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಗತಿಯಲ್ಲಿರುವ ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಅವರು ಈ ಮಾಹಿತಿ ನೀಡಿದರು.ನೈಟ್ ಲ್ಯಾಂಡಿಂಗ್‌ ವ್ಯವಸ್ಥೆಯ ಅಳವಡಿಕೆ ಕುರಿತು ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚೆ ನಡೆಸಿದ ಅವರು, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮುಂಬರುವ ವಾರ ತಾವು ಮತ್ತೊಮ್ಮೆ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಲಿದ್ದು, ಅಷ್ಟರೊಳಗೆ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಇಲಾಖಾ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಗಡುವು ನೀಡಿದರು. ಜೂನ್ ಮೊದಲ ವಾರದ ವೇಳೆಗೆ ನೈಟ್ ಲೈಟಿಂಗ್ ಕಾಮಗಾರಿ ಪೂರ್ಣಗೊಂಡು, ರಾತ್ರಿ ವೇಳೆಯೂ ವಿಮಾನಗಳ ಹಾರಾಟಕ್ಕೆ ಮುಕ್ತವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

Malenadu Today Shivamogga
ಜೂನ್ ಮೊದಲ ವಾರದಲ್ಲಿ , ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಬಿಗ್​ ಅಪ್​ಡೇಟ್ Shivamogga Airport Night Landing Works to be Completed by First Week of June