ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿ ಖಾತೆ ಸಚಿವರಾದ ಎಂ.ಬಿ. ಪಾಟೀಲ್ ಅವರನ್ನು ಭೇಟಿಯಾದ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಶಿವಮೊಗ್ಗ ವಿಮಾನ ನಿಲ್ದಾಣದಿಂದ ಇಲ್ಲಿವರೆಗೂ ಕಾರ್ಯ ನಿರ್ವಹಿಸುತ್ತಿದ್ದ ಇಂಡಿಗೋ ವಿಮಾನಯಾನ ಸೇವೆಯನ್ನು ರದ್ದುಪಡಿಸದಂತೆ ಮನವಿ ಮಾಡಿದ್ರು. ಇಂಡಿಗೋ ವಿಮಾನ ಯಾನ ಸೇವೆಯನ್ನು ಯಥಾಸ್ಥಿತಿಯಲ್ಲಿ ಸೇವೆಯನ್ನು ಮುಂದುವರಿಸಲು ಸೂಕ್ತ ಸೂಕ್ತ ಕ್ರಮ ಜರುಗಿಸುವಂತೆ ಮನವಿ ಪತ್ರವನ್ನು ನೀಡಿದರು.
ತಮ್ಮ ಮನವಿಯಲ್ಲಿ ಅವರು ಪ್ರಮುಖ ಪ್ರವಾಸಿ ತಾಣವಾಗಿರುವ ಶಿವಮೊಗ್ಗ ಜಿಲ್ಲೆಗೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುತ್ತಾರೆ. ಪ್ರಸ್ತುತ ಶಿವಮೊಗ್ಗ ಸಂಸ್ಥೆಯು ವಿಮಾನ ನಿಲ್ದಾಣದಿಂದ ಇಂಡಿಗೋ ಸಂಸ್ಥೆಯು ಬೆಂಗಳೂರು, ಹೈದರಾಬಾದ್ ಮತ್ತು ತಿರುಪತಿ ಸೇರಿದಂತೆ ವಿವಿಧ ಸ್ಥಳಗಳ ಸ್ಥಳಗಳಿಗೆ ವಿಮಾನಯಾನ ಸೇವೆಯನ್ನು ಯಶಸ್ವಿಯಾಗಿ ಒದಗಿಸುತ್ತಿದೆ.
ಇಂಡಿಗೋ ವಿಮಾನ ರದ್ದು ಪಡಿಸಬೇಡಿ
ಈ ಮಾರ್ಗಗಳಲ್ಲಿ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು, ಉದ್ಯಮಿಗಳು, ವ್ಯಾಪಾರಸ್ಥರು ಹಾಗೂ ವಿದ್ಯಾರ್ಥಿಗಳು ಪ್ರಯಾಣ ಬೆಳೆಸುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯ ಶೈಕ್ಷಣಿಕ ವಲಯ ಹಾಗೂ ವ್ಯಾಪಾರ ವಹಿವಾಟುಗಳ ಅಭಿವೃದ್ಧಿಗೆ ಅತ್ಯುತ್ತಮ ಕೊಡುಗೆ ಲಭಿಸುತ್ತಿದೆ ಎಂದು ವಿವರಿಸಿದರು
ಇತ್ತೀಚೆಗೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನಯಾನ ಸಂಸ್ಥೆಯು ತನ್ನ ಸೇವೆಯನ್ನು ಸ್ಥಗಿತಗೊಳಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ವಿಚಾರವನ್ನು ಒಂದು ವಿಶೇಷ ಪ್ರಕರಣವೆಂದು ಪರಿಗಣಿಸಬೇಕು. ರಾಜ್ಯ ಸರ್ಕಾರದ ವತಿಯಿಂದ ಇಂಡಿಗೋ ವಿಮಾನಯಾನ ಸಂಸ್ಥೆಗೆ ನೀಡಬೇಕಾಗಿರುವ ಅಗತ್ಯ ಸವಲತ್ತುಗಳನ್ನು ಒದಗಿಸಿಕೊಡಬೇಕು.
ಯಾವುದೇ ಕಾರಣಕ್ಕೂ ಈ ವಿಮಾನ ಸೇವೆಯು ರದ್ದಾಗದಂತೆ ಎಚ್ಚರವಹಿಸಿ, ಎಂದಿನಂತೆ ಸುಗಮವಾಗಿ ವಿಮಾನಯಾನ ಸೇವೆಯನ್ನು ಮುಂದುವರಿಸಿಕೊಂಡು ಹೋಗಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಬೇಕು ಎಂದು ಶಾಸಕರು ಸಚಿವರಲ್ಲಿ ಒತ್ತಾಯಿಸಿದರು.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw
