ಶಿವಮೊಗ್ಗ ನಗರದಲ್ಲಿ ಇಂದಿನಿಂದ ಎರಡು ದಿನ ಕುಡಿಯುವ ನೀರಿನ ವ್ಯತ್ಯಯ

ಶಿವಮೊಗ್ಗ: ನಗರದ ಜನತೆಗೆ ಕುಡಿಯುವ ನೀರು ಪೂರೈಸುವ ಪ್ರಮುಖ ಮೂಲವಾದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ತಾಂತ್ರಿಕ ಕಾಮಗಾರಿ ನಡೆಯುತ್ತಿರುವುದರಿಂದ, ಮೇ 05 ಮತ್ತು 06 ರಂದು ನಗರದಾದ್ಯಂತ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. 

ಏರ್‌ಪೋರ್ಟ್ ನೈಟ್ ಲ್ಯಾಂಡಿಂಗ್ , ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸೇರಿ, ಸಮಗ್ರ ಸುದ್ದಿಗಳಿಗಾಗಿ ಇ-ಪೇಪರ್ ಓದಿ

ಜಲಶುದ್ಧೀಕರಣ ಘಟಕದಲ್ಲಿರುವ ಕ್ಲಾರಿಪ್ಲೋಕ್ಯೂಲೇಟರ್ ಯಂತ್ರದ ದುರಸ್ಥಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಯು ನೀರನ್ನು ಶುದ್ಧೀಕರಿಸುವ ಪ್ರಕ್ರಿಯೆಯಲ್ಲಿ ಅತ್ಯಂತ ಪ್ರಮುಖವಾಗಿದ್ದು, ಇದನ್ನು ಸರಿಪಡಿಸುವುದು ಅನಿವಾರ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ದೈನಂದಿನ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದುಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ.

Shimoga Water Supply Interruption