ದೊಡ್ಡಪೇಟೆ ಪೊಲೀಸರಿಂದ ಸಲೂನ್, ಬ್ಯೂಟಿ ಪಾರ್ಲರ್‌ಗಳಲ್ಲಿ ಅನಿರೀಕ್ಷಿತ​ ತಪಾಸಣೆ

ಹಂಚಿಕೊಳ್ಳಿ
WhatsApp Facebook X Telegram
ದೊಡ್ಡಪೇಟೆ ಠಾಣಾ ವ್ಯಾಪ್ತಿಯ ಸಲೂನ್, ಬ್ಯೂಟಿ ಪಾರ್ಲರ್‌ಗಳ ಮೇಲೆ ಪೊಲೀಸರ ತಪಾಸಣೆ Shivamogga Police Inspect Salons and Beauty Parlors in Doddapete Station Limits
ದೊಡ್ಡಪೇಟೆ ಠಾಣಾ ವ್ಯಾಪ್ತಿಯ ಸಲೂನ್, ಬ್ಯೂಟಿ ಪಾರ್ಲರ್‌ಗಳ ಮೇಲೆ ಪೊಲೀಸರ ತಪಾಸಣೆShivamogga Police Inspect Salons and Beauty Parlors in Doddapete Station Limits

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ಸ್ಪಾಗಳಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿವೆ ಎಂಬ ಆರೋಪವೊಂದು ನೇರವಾಗಿ ಕೇಳಿ ಬಂದ ಬೆನ್ನಲ್ಲೆ ಶಿವಮೊಗ್ಗ ಪೊಲೀಸ್ ನಿಧಾನವಾಗಿಯಾದರೂ ಅಲರ್ಟ್ ಆಗಿದ್ದಾರೆ. ಈ ಸಂಬಂಧ ಎಸ್​ಪಿ ನಿಖಿಲ್ ಬಿ ನಗರದಲ್ಲಿರುವ ವಿವಿಧ ಬ್ಯೂಟಿ ಪಾರ್ಲರ್​​ಗಳಲ್ಲಿ ರಾಂಡಮ್​ ಚೆಕ್ಕಿಂಗ್ ಆರಂಭಿಸಿದ್ದಾರೆ.

ದೊಡ್ಡಪೇಟೆ ಪೊಲೀಸರಿಂದ ಕಾರ್ಯಾಚರಣೆ

ಪೂರಕ ಎಂಬಂತೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ನಿನ್ನೆ ದಿನ ಪೊಲೀಸ್ ತಂಡವೊಂದು ಕಾರ್ಯಾಚರಣೆ ನಡೆಸಿದೆ. ಐವರು ಮಹಿಳಾ ಪೊಲೀಸ್​ ಸಿಬ್ಬಂದಿ ಹಾಗೂ ಅಧಿಕಾರಿಯ ಜೊತೆಗೆ ದೊಡ್ಡಪೇಟೆ ಪೊಲೀಸ್ ಇನ್​ಸ್ಪೆಕ್ಟರ್​ ಹಾಗೂ ಸಬ್ಬಿನ್​ಸ್ಪೆಕ್ಟರ್​ ತಂಡ ಕಾರ್ಯಾಚರಣೆ ನಡೆಸಿದೆ.

ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಿವಿಧ ಸಲೂನ್ ಹಾಗೂ ಬ್ಯೂಟಿ ಪಾರ್ಲರ್‌ಗಳಿಗೆ ದಿಢೀರ್ ಭೇಟಿಕೊಟ್ಟ ಪೊಲೀಸ್​ ತಂಡ ತಪಾಸಣೆ ನಡೆಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಪರಿಶೀಲನೆ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಶೇಷ ತಂಡ ಏಕಕಾಲದಲ್ಲಿ ಹಲವು ಸಲೂನ್ ಹಾಗೂ ಬ್ಯೂಟಿ ಪಾರ್ಲರ್‌ಗಳಿಗೆ ಭೇಟಿ ನೀಡಿ ಸ್ಪಾಗಳಲ್ಲಿ ಯಾವುದಾದರೂ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಿದೆ.

ಅಲ್ಲದೆ ಸ್ಪಾದಲ್ಲಿ ನಡೆಯುವ ಚಟುವಟಿಕೆಗಳನ್ನು ಪರಿಶೀಲಿಸಿದೆ, ಸಿಸಿ ಕ್ಯಾಮರಾಗಳನ್ನು ಹಾಗೂ ದಾಖಲೆಗಳನ್ನ ತಪಾಸಣೆ ಮಾಡಿದೆ. ಇನ್ನೂ ಈ ವೇಳೆ ಮಾಲೀಕರಿಗೆ ಹಾಗೂ ಸಿಬ್ಬಂದಿಗೆ ಎಚ್ಚರಿಕೆ ನೀಡಲಾಗಿದೆ.ಯಾವುದೇ ರೀತಿಯ ಅಕ್ರಮ ಅಥವಾ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

ದೊಡ್ಡಪೇಟೆ ಠಾಣಾ ವ್ಯಾಪ್ತಿಯ ಸಲೂನ್, ಬ್ಯೂಟಿ ಪಾರ್ಲರ್‌ಗಳ ಮೇಲೆ ಪೊಲೀಸರ ತಪಾಸಣೆShivamogga Police Inspect Salons and Beauty Parlors in Doddapete Station Limits
ದೊಡ್ಡಪೇಟೆ ಠಾಣಾ ವ್ಯಾಪ್ತಿಯ ಸಲೂನ್, ಬ್ಯೂಟಿ ಪಾರ್ಲರ್‌ಗಳ ಮೇಲೆ ಪೊಲೀಸರ ತಪಾಸಣೆ

Shivamogga Police Inspect Salons and Beauty Parlors in Doddapete Station Limits

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor