ಹವಾಮಾನ ವರದಿ : ಮುಂದಿನ 7 ದಿನಗಳ ಮಳೆ ಮುನ್ಸೂಚನೆ ಇದೆಯಾ!? ಐಎಂಡಿ ರಿಪೋರ್ಟ್​ ಗಮನಿಸಿ

ಹಂಚಿಕೊಳ್ಳಿ
WhatsApp Facebook X Telegram
ಯಲ್ಲೋ ಅಲರ್ಟ್ ಯಲ್ಲೋ ಅಲರ್ಟ್ಮುಂ ದಿನ ಐದು ದಿನ ! ಮಳೆ ಮತ್ತು ಬಿಸಿಲು? ಹೇಗಿರಲಿದೆ ಶಿವಮೊಗ್ಗದ ವಾತಾವರಣ!
ಶಿವಮೊಗ್ಗ ಹವಾಮಾನ ಮುನ್ಸೂಚನೆ ಬಿರುಗಾಳಿ ಸಹಿತ ಮಳೆ ಸಾಧ್ಯತೆ Shivamogga Weather Forecast Rain and Gusty Winds Expected

ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಬಿಡುಗಡೆ ಮಾಡಿರುವ ವರದಿ ಪ್ರಕಾರ, ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಗಳಿಲ್ಲ ಎಂಬ ವಿಚಾರ ತಿಳಿದು ಬಂದಿದೆ. ಇನ್ನೂ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಗಳಿವೆ. ‘

ಹವಾಮಾನ ವರದಿ ಐಎಂಡಿ ರಿಪೋರ್ಟ್

ಅದೇ ರೀತಿಯಲ್ಲಿ ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ಅಂದಾಜಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಮಗಳೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಮುಂದಿನ 24 ಹಾಗೂ 48 ಗಂಟೆಗಳಲ್ಲಿಸಂಜೆ ಅಥವಾ ರಾತ್ರಿಯ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಹಾಗೂ ರಾತ್ರಿ ಹೊತ್ತಿನಲ್ಲಿ ಕೆಲವು ಕಡೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಆಯ್ದ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು. ಗರಿಷ್ಠ ತಾಪಮಾನವು 34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತನ್ನ ಡೈಲಿ ಬುಲೆಟಿನ್​ನಲ್ಲಿ ಮಾಹಿತಿ ನೀಡಿದೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

ಹವಾಮಾನ ವರದಿ:  ಮುಂದಿನ 7 ದಿನಗಳ ಮಳೆ ಮುನ್ಸೂಚನೆ ಇದೆಯಾ!? ಐಎಂಡಿ ರಿಪೋರ್ಟ್​ ಗಮನಿಸಿ , Karnataka Weather Repor 7-Day Rainfall Forecast Issued
ಹವಾಮಾನ ವರದಿ: ಮುಂದಿನ 7 ದಿನಗಳ ಮಳೆ ಮುನ್ಸೂಚನೆ ಇದೆಯಾ!? ಐಎಂಡಿ ರಿಪೋರ್ಟ್​ ಗಮನಿಸಿ , Karnataka Weather Repor 7-Day Rainfall Forecast Issued

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor