ತೀರ್ಥಹಳ್ಳಿ: ಎಪಿಎಂಸಿ ಮುಂಭಾಗದ ಮಳಿಗೆಗಳಲ್ಲಿ ಅಗ್ನಿ ಅವಘಡ; ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಯ ಮುಂಭಾಗದಲ್ಲಿರುವ ಮಳಿಗೆಗಳಲ್ಲಿ ತಡರಾತ್ರಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಮಳಿಗೆಗಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದ್ದು,ಭಾರಿ ನಷ್ಟವುಂಟಾಗಿದೆ. 

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

ರಸ್ತೆ ಪಕ್ಕದಲ್ಲಿದ್ದ ಮಳಿಗೆಗಳಲ್ಲಿ ನಿನ್ನೆ ತಡರಾತ್ರಿ ಅಚಾನಕ್ಕಾಗಿ ಬೆಂಕಿ ಕಾಣಿಸಿಕೊಂಡಿದೆ. ಗಾಳಿಯ ರಭಸಕ್ಕೆ ಬೆಂಕಿಯ ಜ್ವಾಲೆಗಳು ಕ್ಷಣಾರ್ಧದಲ್ಲಿ ಪಕ್ಕದ ಶೆಡ್‌ಗಳಿಗೂ ವ್ಯಾಪಿಸಿವೆ. ಪರಿಣಾಮವಾಗಿ ಮಳಿಗೆಯೊಳಗಿದ್ದ ಬೆಲೆಬಾಳುವ ಪೀಠೋಪಕರಣಗಳು, ದಾಸ್ತಾನು ಮಾಡಲಾಗಿದ್ದ ವ್ಯಾಪಾರೀ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. 

ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಸಕಾಲದಲ್ಲಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣವೇನೆಂದು ಸದ್ಯಕ್ಕೆ ತಿಳಿದುಬಂದಿಲ್ಲ.

Massive Fire Outbreak at Shops Near Tirthahalli APMC