ಕುವೆಂಪು ವಿವಿ 35ನೇ ಘಟಿಕೋತ್ಸವ: ಕೋಣಂದೂರು ಲಿಂಗಪ್ಪ ಸೇರಿ ಮೂವರಿಗೆ ಗೌರವ ಡಾಕ್ಟರೇಟ್; ಉದ್ಯೋಗ ಸೃಷ್ಟಿಕರ್ತರಾಗಿ ಎಂದು ರಾಜ್ಯಪಾಲರ ಕರೆ!

ಶಿವಮೊಗ್ಗ: ಜ್ಞಾನಗಂಗೋತ್ರಿ ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವವು ಅತ್ಯಂತ ಸಂಭ್ರಮದಿಂದ ನೆರವೇರಿತು. ಸಮಾಜವಾದಿ ನಾಯಕ ಕೋಣಂದೂರು ಲಿಂಗಪ್ಪ, ರಂಗಕರ್ಮಿ ಕೆ.ವಿ. ಅಕ್ಷರ ಮತ್ತು ಶಿಕ್ಷಣ ತಜ್ಞ ಪ್ರೊ. ಎಚ್.ಎ. ರಂಗನಾಥ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಲಾಯಿತು. ಇದೇ ವೇಳೆ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಶ್ಲಾಘಿಸಲಾಯಿತು. 

ಸಿಎಂ ಸಿದ್ದರಾಮಯ್ಯ ಬೆಸ್ಟ್ ಸಿಎಂ POST ನಲ್ಲಿ ಅವಹೇಳನ! ಶಿವಮೊಗ್ಗದಲ್ಲಿ ದಾಖಲಾಯ್ತು ಮತ್ತೊಂದು ಕಂಪ್ಲೆಂಟ್! ಏನಿದು

Thawarchand Gehlot ಉದ್ಯೋಗಾಕಾಂಕ್ಷಿಗಳಾಗದೆ ಅವಕಾಶಗಳ ಸೃಷ್ಟಿಕರ್ತರಾಗಿರಿ: ಥಾವರ್​ ಚಂಡ್​ ಗೆಹ್ಲೋಟ್​​

ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕದ ರಾಜ್ಯಪಾಲರಾದಥಾವರ್ ಚಂದ್ ಗೆಹ್ಲೋಟ್ ಅವರು, ಪದವಿ ಪಡೆದ ಯುವಜನತೆಗೆ ಭವಿಷ್ಯದ ದಿಕ್ಸೂಚಿ ನೀಡಿದರು. ವಿದ್ಯಾರ್ಥಿಗಳು ಕೇವಲ ಉದ್ಯೋಗವನ್ನು ಅರಸುವ ಉದ್ಯೋಗಾಕಾಂಕ್ಷಿಗಳಾಗದೆ, ಇತರರಿಗೆ ಉದ್ಯೋಗ ನೀಡುವ ಅವಕಾಶಗಳ ಸೃಷ್ಟಿಕರ್ತರಾಗಬೇಕು. ಇಂದಿನ ಕಾಲಘಟ್ಟದಲ್ಲಿ ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಮೂಲಕ ವೈಯಕ್ತಿಕವಾಗಿ ಮತ್ತು ಸಮಾಜಕ್ಕಾಗಿ ಹೊಸ ಸಾಧ್ಯತೆಗಳನ್ನು ಸೃಷ್ಟಿಸಲು ಶ್ರಮಿಸಬೇಕು ಎಂದು ಕರೆ ನೀಡಿದರು.

ಮುಂದುವರಿದು ಮಾತನಾಡಿದ ಅವರು, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ಅಭಿವೃದ್ಧಿ ಹೊಂದಿದ ಭಾರತ 2047 ದೃಷ್ಟಿಕೋನದತ್ತ ಸಾಗುತ್ತಿದೆ. ಈ ಗುರಿ ತಲುಪಲು ಯುವಕರ ಪಾತ್ರ ನಿರ್ಣಾಯಕ. ಮೇಕ್ ಇನ್ ಇಂಡಿಯಾ ಮತ್ತು ವೋಕಲ್ ಫಾರ್ ಲೋಕಲ್ ಅಭಿಯಾನಗಳಿಗೆ ಶಕ್ತಿ ತುಂಬುವ ಮೂಲಕ ಭಾರತವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿ ಮಾಡಬೇಕು. ಹೊಸ ಶಿಕ್ಷಣ ನೀತಿ (NEP-2020) ಶಿಕ್ಷಣವನ್ನು ಕೇವಲ ಪದವಿ ಪಡೆಯುವ ಸಾಧನವಾಗಿರಿಸದೆ, ಜೀವನ ಕೌಶಲ್ಯ ಮತ್ತು ಸಾಮಾಜಿಕ ಜವಾಬ್ದಾರಿಯ ಅಡಿಪಾಯವನ್ನಾಗಿ ಮಾಡಿದೆ. ಕೃತಕ ಬುದ್ಧಿಮತ್ತೆ, ಡೇಟಾ ವಿಜ್ಞಾನ ಮತ್ತು ಡಿಜಿಟಲ್ ಕ್ರಾಂತಿಯ ಈ ಯುಗದಲ್ಲಿ ನಿರಂತರವಾಗಿ ಕಲಿಯುವ ಮನೋಭಾವ ಬೆಳೆಸಿಕೊಳ್ಳಬೇಕು” ಎಂದರು. 

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯಂತಹ ಸವಾಲುಗಳನ್ನು ಎದುರಿಸಲು ಸಕಾರಾತ್ಮಕ ಪ್ರಯತ್ನಗಳು ಅಗತ್ಯ. ವಿಶ್ವವಿದ್ಯಾಲಯಕ್ಕೆ ಹೆಸರಿಟ್ಟಿರುವ ಕುವೆಂಪು ಅವರ ವಿಶ್ವ ಮಾನವೀಯತೆ ಸಂದೇಶವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಆದರ್ಶಗಳು ಸಮಾಜದಲ್ಲಿ ಸಮಾನತೆ ಮತ್ತು ಪ್ರಗತಿಪರ ಚಿಂತನೆಯನ್ನು ಪ್ರೇರೇಪಿಸುತ್ತವೆ ಎಂದು ಕಿವಿಮಾತು ಹೇಳಿದರು.

Thawarchand Gehlot ವಿದ್ಯಾರ್ಥಿನಿಯರ ಅಭೂತಪೂರ್ವ ಸಾಧನೆ

ಶೈಕ್ಷಣಿಕವಾಗಿ ಈ ಬಾರಿ ಮಹಿಳೆಯರು ಮೇಲುಗೈ ಸಾಧಿಸಿದ್ದಾರೆ. ಒಟ್ಟು 16,955 ಪದವೀಧರರಲ್ಲಿ 9,940 ಮಹಿಳೆಯರಿದ್ದಾರೆ. 155 ಚಿನ್ನದ ಪದಕಗಳಲ್ಲಿ 68 ವಿದ್ಯಾರ್ಥಿನಿಯರು ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಕನ್ನಡ ವಿಭಾಗದ ಅಭಿಷೇಕ್ ಹೆಚ್. ಎಂ. ಒಟ್ಟು 10 ಚಿನ್ನದ ಪದಕಗಳನ್ನು ಪಡೆದು ಇಡೀ ವಿಶ್ವವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವರಾದ ಡಾ. ಎಂ.ಸಿ. ಸುಧಾಕರ್, ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Thawarchand Gehlot Applauds Female Power