ಅಸ್ವಸ್ಥನಾಗಿ ಬಿದ್ದಿದ್ದ ಅನಾಮದೇಯ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು, ವಾರಸುದಾರರ ಪತ್ತೆಗೆ ಮನವಿ

ಹಂಚಿಕೊಳ್ಳಿ
WhatsApp Facebook X Telegram
ಅಸ್ವಸ್ಥನಾಗಿ ಬಿದ್ದಿದ್ದ ಅನಾಮದೇಯ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು, ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ: ನಗರದ ಕೋಟೆ ಪೊಲೀಸ್  ಠಾಣಾ ವ್ಯಾಪ್ತಿಯ ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಅಸ್ವಸ್ಥರಾಗಿ ಬಿದ್ದಿದ್ದ ಸುಮಾರು 45 ರಿಂದ 50 ವರ್ಷ ವಯೋಮಿತಿಯ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಶಿವಮೊಗ್ಗದ ತುಂಬೆಲ್ಲಾ ತಗ್ಗಿನಲ್ಲಿ ಹಾರುವ ವಿಮಾನ! ಮುಚ್ಚಿಡುತ್ತಿರುವ ಸತ್ಯಗಳೇನು?

ಮೇ 4ರಂದು ಮಾರುಕಟ್ಟೆ ರಸ್ತೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಬಿದ್ದಿದ್ದ ಈ ವ್ಯಕ್ತಿಯನ್ನು ಸಾರ್ವಜನಿಕರು ಗಮನಿಸಿ, ಕೂಡಲೇ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೇ 5ರಂದು ಅವರು ಮೃತಪಟ್ಟಿದ್ದಾರೆ. ಮೃತರ ಹೆಸರು, ವಿಳಾಸ ಅಥವಾ ಸಂಬಂಧಿಕರ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Unidentified Man Dies ಮೃತರ ಚಹರೆ

ಸುಮಾರು 5 ಅಡಿ ಎತ್ತರ, ದುಂಡು ಮುಖ, ದೃಢಕಾಯ ಮೈಕಟ್ಟು ಹಾಗೂ ಬಿಳಿ ಮೈಬಣ್ಣ ಹೊಂದಿದ್ದಾರೆ. ಮೃತಪಡುವ ಸಮಯದಲ್ಲಿ ಮೆರೂನ್ ಬಣ್ಣದ ತುಂಬು ತೋಳಿನ ಶರ್ಟ್ ಮತ್ತು ಕಪ್ಪು ಬಣ್ಣದ ಫಾರ್ಮಲ್ ಪ್ಯಾಂಟ್ ಧರಿಸಿದ್ದರು ಎಂದು ತಿಳಿದುಬಂದಿದೆ.

ಈ ವ್ಯಕ್ತಿಯ ವಾರಸುದಾರರ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ತಕ್ಷಣವೇ ಕೋಟೆ ಪೊಲೀಸ್ ಠಾಣೆಗೆ ಖುದ್ದಾಗಿ ಭೇಟಿ ನೀಡಬಹುದು ಅಥವಾ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 08182-261415 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

Unidentified Man Dies in Shivamogga Meggan Hospital

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor