ಪಿಯುಸಿ ಪಾಸಾದವರಿಗೆ ಇಲ್ಲಿದೆ ನೋಡಿ ಉದ್ಯೋಗ ಮಾಹಿತಿ 

ಶಿವಮೊಗ್ಗ:ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ.11 ಬೆಳಗ್ಗೆ 10ಕ್ಕೆ ಪ್ರತಾಪ್ ಆರ್ಕಿಡ್, 2ನೇ ಮಹಡಿ, ದುರ್ಗಿಗುಡಿ ಜೈಲ್ ಸರ್ಕಲ್, ಡಿಸಿಬಿ ಬ್ಯಾಂಕ್ ಹತ್ತಿರ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನರಸಿಂಹ ಗಂಧದಮನೆ ನೇಮಕ

ಈ ನೇರ ಸಂದರ್ಶನದಲ್ಲಿ ರೇಜ್ ಮ್ಯಾನೇಜ್ಮೆಂಟ್ ಸಲ್ಯೂಷನ್ ಕಂಪನಿ ಭಾಗವಹಿಸಲಿದ್ದು, ತಮ್ಮಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಪಿಯುಸಿ ಮತ್ತು ಯಾವುದೇ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Direct Job Interview in Shivamogga

Direct Job Interview Axis Bank Recruitment Job Fair in Shivamogga Karnataka Prison Department Shivamogga Health Dept Recruitment 2026
Direct Job Interview