ಹೊಸನಗರ: ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರು-ಕುಂದಾಪುರ ಖಾಸಗಿ ಬಸ್ ಪಲ್ಟಿ; 11 ಪ್ರಯಾಣಿಕರಿಗೆ ಗಾಯ

ಹಂಚಿಕೊಳ್ಳಿ
WhatsApp Facebook X Telegram
Hosanagara Bus Accident Private Bus Overturns
Hosanagara Bus Accident Private Bus Overturns

ಹೊಸನಗರ: ಪಟ್ಟಣದ ಹೊರವಲಯದ ರಾಜ್ಯ ಹೆದ್ದಾರಿ 766 ಸಿ ಜಯನಗರದ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಮುಂಜಾನೆ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಾಗರ್ ಹೆಸರಿನ ಖಾಸಗಿ ಬಸ್ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ತಪ್ಪಿದೆ.

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನರಸಿಂಹ ಗಂಧದಮನೆ ನೇಮಕ

ಇಂದು ಬೆಳಿಗ್ಗೆ ಸುಮಾರು 5:15ರ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್, ರಸ್ತೆಯ ಎಡಭಾಗಕ್ಕೆ ಮಗುಚಿ ಬಿದ್ದಿದೆ. ಬಸ್‌ನಲ್ಲಿದ್ದ ಒಟ್ಟು 11 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ. 

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಹೊಸನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hosanagara Bus Accident Private Bus Overturns

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor