Leopard Dies ಮಂಡಗದ್ದೆ: ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ಇಂದು ಮಧ್ಯಾಹ್ನ ಬೈಕ್ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿ ಕಡೆಗೆ ಬೈಕ್ ಸವಾರ ಚಲಿಸುತ್ತಿದ್ದಾಗ, ಮಂಡಗದ್ದೆ ಸಮೀಪದ ಅರಣ್ಯ ಭಾಗದಿಂದ ಚಿರತೆಯು ಹಠಾತ್ತನೆ ರಸ್ತೆ ದಾಟಲು ಅಡ್ಡ ಬಂದಿದೆ. ಈ ವೇಳೆ ಸವಾರನಿಗೆ ಬೈಕ್ ನಿಯಂತ್ರಿಸಲು ಸಾಧ್ಯವಾಗದೆ ಚಿರತೆಗೆ ಡಿಕ್ಕಿ ಹೊಡೆದಿದ್ದಾನೆ.‘
ಶಿವಮೊಗ್ಗ: ಎರಡು ದಿನ ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ಕರೆಂಟ್ ಇರಲ್ಲ. ಎಲ್ಲಿ, ಯಾವಾಗ
ಡಿಕ್ಕಿಯ ರಭಸಕ್ಕೆ ಚಿರತೆಯು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. ಇದರ ಪರಿಣಾಮ ಬೈಕ್ ಸಮೇತ ಕೆಳಗೆ ಬಿದ್ದ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಗಾಜನೂರು ಆರ್ ಎಫ್ ಓ ವಿನಯ್ ಕುಮಾರ್ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತಾದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರೆಬೇಕಿದೆ.
