ಕುರಿ ಸಾಕಾಣಿಕೆ ಬಗ್ಗೆ ತಿಳ್ಕೋಬೇಕಾ, ಹಾಗಾದ್ರೆ ಪುರುಷ ಹಾಗೂ ಮಹಿಳೆಯರಿಗೆ ಇಲ್ಲಿದೆ ನೋಡಿ ಪ್ರಮುಖ ಸುದ್ದಿ

ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಮೇ 18 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಕುರಿ ಸಾಕಾಣಿಕೆ ಕುರಿತು ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಿದೆ.

ಶಿವಮೊಗ್ಗ ನಗರದಲ್ಲಿ ಇಂದಿನಿಂದ ಎರಡು ದಿನ ಕುಡಿಯುವ ನೀರಿನ ವ್ಯತ್ಯಯ 

Free Sheep Farming ಶಿಬಿರದಲ್ಲಿ ಕುರಿ ಸಾಕಾಣಿಕೆ ಜೊತೆಗೆ ವೈಜ್ಙಾನಿಕ ರೀತಿಯಲ್ಲಿ ಹಸು ಸಾಕಾಣಿಕೆ, ಮೇಕೆ ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ತೋಟಗಾರಿಕಾ ಬೆಳೆಗಳು, ಸಾವಯವ ಗೊಬ್ಬರ ತಯಾರಿಕೆ ಬಗ್ಗೆ ತರಬೇತಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. 

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. 

ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ 18 ರಂದು ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವುದು. 

ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ : 18/05/2026 ರೊಳಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050/ 9591514154/ 9686248369/6363139123/ 9505894247 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆAದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Free Sheep Farming Training Canara Bank RSETI