ದೊಡ್ಡ ಸುದ್ದಿ : ಇವತ್ತಿನಿಂದಲೇ ಭದ್ರಾ ಜಲಾಶಯದಿಂದ ನೀರು ರಿಲೀಸ್! ಇದಕ್ಕೆ ನಿಷೇಧವಿದೆ!

ಹಂಚಿಕೊಳ್ಳಿ
WhatsApp Facebook X Telegram
Why is 2000 cusecs water released from Bhadra Reservoir ಭದ್ರಾ ಜಲಾಶಯದಿಂದ ಮೇ 18ರಿಂದ ಕುಡಿಯುವ ನೀರು ಬಿಡುಗಡೆ
Why is 2000 cusecs water released from Bhadra Reservoir ಭದ್ರಾ ಜಲಾಶಯದಿಂದ ಮೇ 18ರಿಂದ ಕುಡಿಯುವ ನೀರು ಬಿಡುಗಡೆ

ಶಿವಮೊಗ್ಗ : ಇವತ್ತಿನಿಂದಲೇ ಭದ್ರಾ ಜಲಾಶಯದಿಂದ ನೀರು ಹರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕುಡಿಯುವ ನೀರಿಗಾಗಿ, ನದಿಗೆ ನೀರು ಹರಿಸಲಾಗುತ್ತಿದೆ.

ಬಹುಗ್ರಾಮ ನದಿ ನೀರು ಯೋಜನೆಯಡಿ ಭದ್ರಾ ಜಲಾಶಯದಿಂದ ನೀರು ರಿಲೀಸ್

ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಹಾಗೂ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಬಹುಗ್ರಾಮ ನದಿ ನೀರು ಯೋಜನೆಯಡಿ ನೀರು ಹರಿಸಲು ತೀರ್ಮಾನಿಸಲಾಗಿದೆ.

ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗಾಗಿ ತುಂಗಭದ್ರಾ ನದಿಯ ನೀರನ್ನು ಅವಲಂಭಿಸಿರುವ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ನೀರನ್ನು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಮೇ.18 ರಿಂದ 23 ರವರೆಗೆ ಪ್ರತಿದಿನ 2000 ಕ್ಯೂಸೆಕ್ಸ್ ನಂತೆ ನೀರನ್ನು ಹರಿಸಲಾಗುವುದು.

ಆದುದರಿಂದ ನದಿಯ ದಂಡೆಯ ಕೆಳಮಟ್ಟದಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಮಾಡುವುದು ಇತ್ಯಾದಿ ಮಾಡಬಾರದೆಂದು ಎಚ್ಚರಿಕೆ ನೀಡಲಾಗಿದೆ.

ನೀರು ಹರಿಸುವ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್‌ಸೆಟ್‌ಗಳಿಂದ ನೀರೆತ್ತುವುದನ್ನೂ ಸಹ ನಿಷೇಧಿಸಲಾಗಿದೆ ಎಂದು ಬಿ.ಆರ್. ಪ್ರಾಜೆಕ್ಟ್, ಭದ್ರಾ ಜಲಾಶಯ ಯೋಜನೆ ಕುಡಿಯುವ ನೀರಿನ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor