ಕೊಲ್ಲೂರು ಸಮೀಪ ಅಪಘಾತ: ಕೇರಳದ ಇಬ್ಬರು ಮಹಿಳೆಯರ ಸಾವು

This Article Written by / ajjimane ganesh / ಮೇ 18, 2026

Road Accident Near Kollur Two Women from Kerala

ಕೊಲ್ಲೂರು / ಕೊಡಚಾದ್ರಿ ಪ್ರವಾಸ ಮುಗಿಸಿ ಮರಳುತ್ತಿದ್ದ ಪ್ರವಾಸಿಗರ ವಾಹನ ಅಪಘಾತಕ್ಕೀಡಾದ ಘಟನೆ ನಿನ್ನೆ ದಿನ ಭಾನುವಾರ ಸಂಭವಿಸಿದೆ. ಈ ಘಟನೆಯಲ್ಲಿ ಕೇರಳ ಮೂಲದ ಇಬ್ಬರು ಮಹಿಳೆಯರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕೊಲ್ಲೂರು ಸಮೀಪ ದಳಿ ಎಂಬಲ್ಲಿ ಈ ಘಟನೆ ನಡೆದಿದೆ. ಒಟ್ಟು 8 ಜನರು ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಕೇರಳದ ನಿವಾಸಿ 34 ವರ್ಷದ ಜ್ಯೋತಿ ಹಾಗೂ 26 ವರ್ಷದ ಆರ್ಯ ಅನೂಪ್ ಎಂದು ಗುರುತಿಸಲಾಗಿದೆ.

ಕೊಡಚಾದ್ರಿಯಿಂದ ಬರುವಾಗ ದುರ್ಘಟನೆ

ಪ್ರವಾಸಿಗರೊಂದಿಗೆ ಕೊಲ್ಲೂರಿನ ಕಡೆಗೆ ಬರುತ್ತಿದ್ದ ಜೀಪ್ ಹಾಗೂ ಕೊಲ್ಲೂರಿನಿಂದ ನಾಗೋಡಿ ಮಾರ್ಗವಾಗಿ ಚಲಿಸುತ್ತಿದ್ದ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಜೀಪ್ ಜಖಂಗೊಂಡಿದೆ. ಜೀಪ್‌ನಲ್ಲಿ ಪ್ರಯಾಣಿಸುತ್ತಿದ್ದವರು ಕೇರಳ ಮೂಲದ ಒಂದೇ ಕುಟುಂಬಕ್ಕೆ ಸೇರಿದವರು. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಭೀಮಾಶಂಕರ್ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

This Article Written by / ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯ್​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ

ಕೊಲ್ಲೂರು ಸಮೀಪ ಅಪಘಾತ

ಮುಂದಿನ ಸುದ್ದಿ ಒದಿ