ಶಿವಮೊಗ್ಗ: ಬಕ್ರೀದ್ ವೇಳೆ ಅಕ್ರಮ ಗೋ ಸಾಗಾಟ ತಡೆಗೆ ಬಜರಂಗದಳ ಆಗ್ರಹ; ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಹಂಚಿಕೊಳ್ಳಿ
WhatsApp Facebook X Telegram
Bajrang Dal Warns Against Illegal Cattle Smuggling
Bajrang Dal Warns Against Illegal Cattle Smuggling

Bajrang Dal ಶಿವಮೊಗ್ಗ: ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಗೋವುಗಳ ಅಕ್ರಮ ಸಾಗಾಣಿಕೆ ಹಾಗೂ ಗೋಹತ್ಯೆಯನ್ನು ತಡೆಗಟ್ಟಲುಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಬಜರಂಗದಳದ ಪ್ರಾಂತ್ಯ ಸುರಕ್ಷಾ ಪ್ರಮುಖ್ ರಾಜೇಶ್ ಗೌಡ ಹೇಳಿದರು.

ಮೇ 20ರಂದು ಶಿವಮೊಗ್ಗದ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಇಂದು ನಗರದ ಪತ್ರಿಕಾ ಭವನದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಗೋವುಗಳ ಅಕ್ರಮ ಸಾಗಾಣಿಕೆ ಹಾಗೂ ಗೋಹತ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಸಹ ಅದನ್ನು ಯಾರೂ ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ. ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದರೂ ಸಹ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದಾರೆ. ಆದ್ದರಿಂದ ರಾಜ್ಯದಾದ್ಯಂತ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಿ ಗೋವುಗಳ ಅಕ್ರಮ ಸಾಗಣೆಯನ್ನು ತಡೆಯಬೇಕು” ಎಂದರು.

ಅಷ್ಟೇ ಅಲ್ಲದೆ, ಕಳೆದ 4 ದಿನಗಳಲ್ಲಿ ನಾವು 100ಕ್ಕೂ ಹೆಚ್ಚು ಹಸುಗಳನ್ನು ರಕ್ಷಣೆ ಮಾಡಿದ್ದೇವೆ. ಇದರ ನಡುವೆ, ಇದುವರೆಗೂ ನಗರದಲ್ಲಿ ಹಸುಗಳನ್ನೇ ಸಾಕದವರ ಮನೆಯ ಮುಂಭಾಗದಲ್ಲಿ ಈಗ 4ರಿಂದ 5 ಹಸುಗಳನ್ನು ತಂದು ಕಟ್ಟಲಾಗಿದೆ. ಅವುಗಳನ್ನು ಅಲ್ಲಿ ಕಟ್ಟಲು ಕಾರಣವೇನು ಎಂಬುದನ್ನು ಸಂಬಂಧಪಟ್ಟವರು ಸ್ಪಷ್ಟಪಡಿಸಬೇಕು” ಎಂದು ಅವರು ಮಾಹಿತಿ ನೀಡಿದರು.

Bajrang Dal ಇದೇ ವೇಳೆ ಪಶುಪಾಲನಾ ಇಲಾಖೆಯು ಜಿಲ್ಲೆಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಪಶುಪಾಲನಾ ಇಲಾಖೆಯ ಅಧಿಕಾರಿಗಳು ಪ್ರತಿ ಮನೆಗೆ ತೆರಳಿ ಜಾನುವಾರುಗಳ ಗಣತಿ ಮಾಡಬೇಕು. ಅಷ್ಟೇ ಅಲ್ಲದೆ, ಗಣತಿ ಮಾಡಿದ ನಂತರ ಅವುಗಳ ಕಿವಿಗೆ ಗುರುತಿನ ಓಲೆ (ಟ್ಯಾಗ್) ಅಳವಡಿಸಬೇಕು. ಯಾರ ಮನೆಯ ಮುಂಭಾಗದಲ್ಲಿ ಹಸುಗಳನ್ನು ಕಟ್ಟಲಾಗಿದೆಯೋ, ಅವು ಬಕ್ರೀದ್ ಹಬ್ಬದ ನಂತರವೂ ಅಲ್ಲಿಯೇ ಇವೆಯೇ ಅಥವಾ ಇಲ್ಲವೇ ಎಂಬ ಮಾಹಿತಿಯನ್ನು ಸಂಗ್ರಹಿಸಬೇಕು. ಒಂದು ವೇಳೆ ಹಸು ಇಲ್ಲ, ಅದನ್ನು ನಾವು ಮಾರಾಟ ಮಾಡಿದ್ದೇವೆ ಎಂದು ಹೇಳಿದರೆ, ಅದನ್ನು ಕೊಂಡವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ವಿಚಾರಣೆ ನಡೆಸಬೇಕು. ಇದೇನಾದರೂ ಸಾಧ್ಯವಾಗದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

Bajrang Dal Warns Against Illegal Cattle Smuggling

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor