ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಕೇಸರಿ ಶಾಲ್​ ನೀಡ್ತೇವೆ, ವಿಶ್ವ ಹಿಂದೂ ಪರಿಶದ್​ 

Hijab Row ಶಿವಮೊಗ್ಗ: ಶಾಲಾ-ಕಾಲೇಜುಗಳಲ್ಲಿಹಿಜಾಬ್ ಧರಿಸಲು ಅವಕಾಶ ನೀಡಿದರೆ, ಇನ್ಮುಂದೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಕೇಸರಿ ಶಾಲು ಹಾಗೂ ತ್ರಿಶೂಲವನ್ನು ನೀಡುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್​  ಪ್ರಮುಖರಾದ ರಮೇಶ್ ಬಾಬು ಹೇಳಿದರು.

ಮೇ 20ರಂದು ಶಿವಮೊಗ್ಗದ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರವು 2022ರ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆದಿದೆ. ಸರ್ಕಾರ ಈ ರೀತಿ ಕಾನೂನು ಬದಲಾವಣೆ ಮಾಡುವುದರಿಂದ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. ನಮ್ಮ ಧರ್ಮದಲ್ಲಿ ಗುರುಕುಲ ಇದ್ದ ಕಾಲದಿಂದಲೂ ಸಹ ಸಮವಸ್ತ್ರ ಪದ್ಧತಿ ಜಾರಿಯಲ್ಲಿತ್ತು. ಬ್ರಿಟಿಷರು ಸಹ ಅದನ್ನೇ ಪಾಲನೆ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ನಮ್ಮ ರಾಜ್ಯ ಸರ್ಕಾರವು ಎಲ್ಲವನ್ನೂ ತಿರುಚಿ, ಒಂದು ಧರ್ಮವನ್ನು ಓಲೈಸಲು ಈ ರೀತಿ ಮಾಡುತ್ತಿದೆ ಎಂದು ಆರೋಪಿಸಿದರು.

ಸರ್ಕಾರ ಏಕೆ ಈ ರೀತಿ ಮಕ್ಕಳಲ್ಲಿ ಗೊಂದಲವನ್ನು ಸೃಷ್ಟಿಸುತ್ತಿದೆಯೋ ತಿಳಿಯುತ್ತಿಲ್ಲ. ಹಿಜಾಬ್‌ಗೆ ಅನುಮತಿ ನೀಡಿದ್ದಾರೆ ಎಂದಾದರೆ, ನಾವು ಸಹ ಇನ್ಮುಂದೆ ಜನಿವಾರವನ್ನು ಒಳಭಾಗದಲ್ಲಿ ಧರಿಸುವುದಕ್ಕಿಂತ ಮೇಲ್ಭಾಗದಲ್ಲಿ ಹಾಕಿಕೊಂಡು ಬರುತ್ತೇವೆ. ಅಷ್ಟೇ ಅಲ್ಲದೆ, ಮುಂದಿನ ತಿಂಗಳಿನಿಂದ ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ವಿತರಿಸುತ್ತೇವೆ. ಅಷ್ಟೇ ಅಲ್ಲದೆ ಮುಂದಿನ ದಿನಗಳಲ್ಲಿ ತ್ರಿಶೂಲಗಳನ್ನು ಸಹ ನೀಡಿ, ವಿದ್ಯಾರ್ಥಿಗಳನ್ನು ತ್ರಿಶೂಲಧಾರಿಗಳನ್ನಾಗಿ ಮಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

 Hijab Row VHP Distribute Saffron Shawls in Schools