ಶಿವಮೊಗ್ಗ ಶಾರ್ಟ್ ನ್ಯೂಸ್ : ಹೊಸ ಸ್ಪೋರ್ಟ್ಸ್​ ಬೈಕ್​ ಚಿಂದಿ, ಅಪಘಾತದಲ್ಲಿ ಇಬ್ಬರಿಗೆ ಗಾಯ, ಡಿಜೆ ಸೌಂಡ್​ ವಿರುದ್ಧ 112 ಪೊಲೀಸ್ ಕಾರ್ಯಾಚರಣೆ

ಕೊನೆಯ ನವೀಕರಣ: 19 ಮೇ 2026, 12:50 ಅಪರಾಹ್ನ

ಹಂಚಿಕೊಳ್ಳಿ
WhatsApp Facebook X Telegram
112 ಪೊಲೀಸ್

ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸವಾರರಿಗೆ ಗಂಭೀರ ಗಾಯಗಳಾದ ಬಗ್ಗೆ ವರದಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಇಆರ್‌ವಿ (ERV) ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರರನ್ನು ಆಂಬ್ಯುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಢಲಾಗುತ್ತಿದೆ. ಘಟನೆಯ ಕುರಿತಾದ ಸಂಪೂರ್ಣ ಮಾಹಿತಿಯನ್ನು ಸಂಚಾರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ

112 ಪೊಲೀಸ್ ಕಾರ್ಯಾಚರಣೆ

ಇನ್ನೊಂದೆಡೆ, ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನೊಬ್ಬ ನಿಯಂತ್ರಣ ತಪ್ಪಿ ತನ್ನ ಹೊಸ ಬೈಕ್ ಅನ್ನು ಅಪಘಾತಪಡಿಸಿಕೊಂಡ ಘಟನೆ ದಿನಾಂಕ 17.05.2026 ರಂದು ನಡೆದಿದೆ. ಈ ಸಂಬಂಧ 112 ಸಹಾಯವಾಣಿಗೆ ಕರೆ ಮಾಡಿದ ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ 112 ಇಆರ್‌ವಿ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ರಭಸಕ್ಕೆ ಹೊಸ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಗಾಯಗೊಂಡಿದ್ದ ಬೈಕ್ ಸವಾರನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂದಿನ ಕಾನೂನು ಕ್ರಮಕ್ಕಾಗಿ ಆಗುಂಬೆ ಪೊಲೀಸ್ ಠಾಣೆಗೆ ಮಾಹಿತಿಯನ್ನು ರವಾನಿಸಲಾಗಿದೆ.

ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೃಹ ಪ್ರವೇಶದ ಕಾರ್ಯಕ್ರಮವೊಂದರಲ್ಲಿ ಡಿಜೆ ಶಬ್ದವನ್ನು ಮಿತಿ ಮೀರಿ ಜೋರಾಗಿ ಹಾಕಿಕೊಂಡು ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಉಂಟುಮಾಡುತ್ತಿರುವ ಬಗ್ಗೆ 112 ತುರ್ತು ಸಹಾಯವಾಣಿಗೆ ದೂರು ಬಂದಿತ್ತು. ಸಾರ್ವಜನಿಕರ ದೂರಿನ ಮೇರೆಗೆ ತಕ್ಷಣವೇ ಸ್ಥಳಕ್ಕೆ ತೆರಳಿದ 112 ಇಆರ್‌ವಿ ಸಿಬ್ಬಂದಿ, ಕಾರ್ಯಕ್ರಮದ ಆಯೋಜಕರಿಗೆ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಸೂಕ್ತ ತಿಳುವಳಿಕೆ ನೀಡಿದ್ದಾರೆ. ಜೊತೆಗೆ, ನಿಯಮ ಉಲ್ಲಂಘಿಸಿ ರಾತ್ರಿ ವೇಳೆ ಹೆಚ್ಚಿನ ಶಬ್ದದಲ್ಲಿ ಧ್ವನಿವರ್ಧಕ ಬಳಸದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ 112 ಪೊಲೀಸ್ ಪ್ರಕಟಣೆ ತಿಳಿಸಿದೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor