ಪುರಲೆ ಕೆರೆ ಏರಿ ಮೇಲೆ ಒಂದಕ್ಕೊಂದು ಡಿಕ್ಕಿಯಾದ ಕಾರು, ಬಸ್! ತುಂಗಾ ನಗರ ಲಿಮಿಟ್​ನಲ್ಲಿಯು ಬಸ್ ಹಾಗೂ ಕಾರಿನ ನಡುವೆ ಅಪಘಾತ

ಹಂಚಿಕೊಳ್ಳಿ
WhatsApp Facebook X Telegram
Bus and Car Accident Under Tunganagara
Bus and Car Accident Under Tunganagara

ಹೊಳೆಹೊನ್ನೂರು: ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಪುರಲೆ ಕೆರೆ ಏರಿ ಮೇಲೆ ನಿನ್ನೆ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂರು ವಾಹನಗಳು ಜಖಂಗೊಂಡಿವೆ.

ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಹಾಗೂ ಎದುರುಗಡೆಯಿಂದ ಬರುತ್ತಿದ್ದ ಮಾರುತಿ ರಿಡ್ಜ್ ಕಾರಿನ ನಡುವೆ ಡಿಕ್ಕಿಯಾಗಿದೆ.
ಇದೇ ವೇಳೆ ರಿಡ್ಜ್ ಕಾರಿನ ಹಿಂದೆ ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರೊಂದು ರಿಡ್ಜ್ ಕಾರಿನ ಎಡಭಾಗಕ್ಕೆ ಗುದ್ದಿ ಜಖಂ ಆಗಿದೆ.

ಪುರಲೆ ಕೆರೆ ಏರಿ ಮೇಲೆ ಒಂದಕ್ಕೊಂದು ಡಿಕ್ಕಿಯಾದ ಕಾರು, ಬಸ್!

ರಿಡ್ಜ್ ಕಾರಿನ ಚಾಲಕನಿಗೆ ತೀವ್ರ ಪೆಟ್ಟಾಗಿದ್ದು ಹತ್ತಿರದ ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ. ಕೆಲ ಹೊತ್ತು ರಸ್ತೆ ಸಂಚಾರಕ್ಕೆ ಅಡ್ಡಿ ಆಯಿತು. ಬಳಿಕ ಪೊಲೀಸರು ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಂಗಾ ನಗರ ಲಿಮಿಟ್​ನಲ್ಲಿಯು ಬಸ್ ಹಾಗೂ ಕಾರಿನ ನಡುವೆ ಅಪಘಾತ

ಇತ್ತ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಸ್ಥಳದಲ್ಲಿದ್ದವರು112 ತುರ್ತು ಸಹಾಯವಾಣಿಗೆ ಕರೆ ಮಾಡಿ ವಾಹನಗಳ ನಡುವೆ ಡಿಕ್ಕಿಯಾಗಿರುವ ಕುರಿತು ಮಾಹಿತಿಯನ್ನು ರವಾನಿಸಿದ್ದರು. ಕರೆ ಸ್ವೀಕರಿಸಿದ 112 ವಿಭಾಗದ ಇಆರ್​ವಿ ಸಿಬ್ಬಂದಿ, ತುರ್ತಾಗಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ವಾಹನಗಳು ಜಖಂಗೊಂಡಿದ್ದವು. ಇನ್ನೂ ಅದೃಷ್ಟಕ್ಕೆ ಯಾವುದೇ ವ್ಯಕ್ತಿಗೂ ಯಾವುದೇ ರೀತಿಯ ಗಾಯಗಳಾಗಿರಲಿಲ್ಲ. ವಾಹನಗಳನ್ನು ತೆರವುಗೊಳಿಸಿದ ಪೊಲೀಸರು ಈ ಸಂಬಂಧ ಠಾಣೆಗೆ ಮಾಹಿತಿ ನೀಡಿದ್ದಾರೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor