ಶಿವಮೊಗ್ಗ: ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ; ಇನ್ಮುಂದೆ ಈ ಹೊಸ ನಿಯಮ ಕಡ್ಡಾಯ 

ಹಂಚಿಕೊಳ್ಳಿ
WhatsApp Facebook X Telegram
Yuvanidhi Scheme Apply Online via Seva Sindhu
Yuvanidhi Scheme Apply Online via Seva Sindhu

Yuvanidhi Scheme ಶಿವಮೊಗ್ಗ :  ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆಶಿವಮೊಗ್ಗ ಜಿಲ್ಲೆಯ ಅರ್ಹ ನಿರುದ್ಯೋಗಿ ಯುವಜನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ 2023ರ ನಂತರ ಸ್ನಾತಕೋತ್ತರ ಪದವಿ, ಪದವಿ ಅಥವಾ ಡಿಪ್ಲೋಮಾ ಮುಗಿಸಿ ಆರು ತಿಂಗಳಾದರೂ ಯಾವುದೇ ಉದ್ಯೋಗ ಸಿಗದ ಅಭ್ಯರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಅಧಿಕೃತವಾಗಿ ತಿಳಿಸಿದ್ದಾರೆ. ಅರ್ಹ ಫಲಾನುಭವಿಗಳು ಸರ್ಕಾರದ ಸೇವಾ ಸಿಂಧು ಪೋರ್ಟಲ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಲು ಕೋರಲಾಗಿದೆ.

ಶಿವಮೊಗ್ಗ: ಬಕ್ರೀದ್ ವೇಳೆ ಅಕ್ರಮ ಗೋ ಸಾಗಾಟ ತಡೆಗೆ ಬಜರಂಗದಳ ಆಗ್ರಹ; ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಯುವನಿಧಿ ಯೋಜನೆಯ ನಿಯಮಾವಳಿಗಳಲ್ಲಿ ಪ್ರಮುಖ ಬದಲಾವಣೆ ತರಲಾಗಿದ್ದು, ಜಿಲ್ಲೆಯ ಫಲಾನುಭವಿಗಳು ಇನ್ಮುಂದೆ ತ್ರೈಮಾಸಿಕವಾಗಿ (ಮೂರು ತಿಂಗಳಿಗೊಮ್ಮೆ) ಸ್ವಯಂ ಘೋಷಣೆ ಸಲ್ಲಿಸುವ ಅಗತ್ಯವಿಲ್ಲ. ಬದಲಾಗಿ, ಪ್ರತಿ ತಿಂಗಳು 25ನೇ ತಾರೀಖಿನ ಒಳಗಾಗಿ ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ತಮ್ಮ ಸ್ವಯಂ ಘೋಷಣೆಯನ್ನುಅಪ್‌ಡೇಟ್ ಮಾಡಬೇಕಾಗುತ್ತದೆ. 

ಒಂದು ವೇಳೆ ಯಾವುದೇ ತಿಂಗಳು ನಿಗದಿತ ದಿನಾಂಕದೊಳಗೆ ಸ್ವಯಂ ಘೋಷಣೆ ಸಲ್ಲಿಸದಿದ್ದರೆ, ಆ ತಿಂಗಳ ನಿರುದ್ಯೋಗ ಭತ್ಯೆಯು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಮೂಲಕ ಜಮಾ ಆಗುವುದಿಲ್ಲ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. 

ಈ ಯೋಜನೆಯಡಿ ನಿಯಮಾನುಸಾರ ಆಯ್ಕೆಯಾಗುವ ಅರ್ಹ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3,000 ರೂಪಾಯಿ ಹಾಗೂ ಡಿಪ್ಲೋಮಾ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 1,500 ರೂಪಾಯಿಗಳ ನಿರುದ್ಯೋಗ ಭತ್ಯೆಯನ್ನು ನೇರವಾಗಿ ಅವರ ಖಾತೆಗೆ ತಲುಪಿಸಲಾಗುತ್ತದೆ. ಈ ಮೂಲಕ ಉದ್ಯೋಗದ ಹುಡುಕಾಟದಲ್ಲಿರುವ ಯುವಸಮುಹಕ್ಕೆ ಆರ್ಥಿಕ ನೆರವು ನೀಡುವುದು ಸರ್ಕಾರದ ಉದ್ದೇಶವಾಗಿದೆ. 

Yuvanidhi Scheme Apply Online via Seva Sindhu 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor