SHIVAMOGGA NEWS TODAY

ಬಕ್ರೀದ್ ಹಬ್ಬ: ಜಿಲ್ಲೆಯಲ್ಲಿ 30 ಕಡೆ ಚೆಕ್ ಪೋಸ್ಟ್, ಹಬ್ಬದ ಹಿನ್ನೆಲೆ ಡಿಸಿ, ಎಸ್ಪಿ ಹೇಳಿದ ಪ್ರಮುಖ ಪಾಯಿಂಟ್ಸ್ ಇಲ್ಲಿದೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ,: ಮುಂಬರುವ ಬಕ್ರೀದ್ ಹಬ್ಬವನ್ನು ಜಿಲ್ಲೆಯಾದ್ಯಂತ ಅತ್ಯಂತ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಶ್ರದ್ಧಾಭಕ್ತಿಗಳಿಂದ ಆಚರಿಸೋಣವೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು. ಶನಿವಾರ ನಗರದ ಡಿಎಆರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಬಕ್ರೀದ್ ಹಬ್ಬ ಕುರಿತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿವಮೊಗ್ಗ ಗ್ರಾಮೀಣ ಭಾಗದಲ್ಲಿ ಈ ದಿನ ಕರೆಂಟ್​​ ಇರಲ್ಲ 

ಸಭೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಹೇಳಿದ ಪ್ರಮುಖ ಪಾಯಿಂಟ್ಸ್ ಇಲ್ಲಿದೆ

Bakrid ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದ ಪ್ರಮುಖ ಪಾಯಿಂಟ್ಸ್

ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡದಂತೆ ಸೌಹಾರ್ದಯುತವಾಗಿ ರಾಜ್ಯಕ್ಕೇ ಮಾದರಿಯಾಗಿ ಹಬ್ಬವನ್ನು ಆಚರಿಸೋಣ.

ಹಬ್ಬದ ವೇಳೆ ಸ್ವಚ್ಛತೆ ಕಾಪಾಡುವುದು ಮತ್ತು ಸುರಕ್ಷತೆ ಕುರಿತು ಈಗಾಗಲೇ ಎರಡು ಬಾರಿ ಸಭೆಯನ್ನು ಮಾಡಿ ಸಮಾಲೋಚನೆ ನಡೆಸಿ, ಅದೇ ರೀತಿ ಯೋಜನೆಗಳನ್ನು ರೂಪಿಸಿಕೊಂಡು ಪೂರ್ವಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ಹಬ್ಬದ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು, ಹಬ್ಬದ ದಿನದಂದು ಯಾವುದೇ ರೀತಿಯ ಕಾನೂನುಬಾಹಿರ ಘಟನೆಗಳು ನಡೆದರೆ ಅದನ್ನು ನಮ್ಮ ಗಮನಕ್ಕೆ ತರಬೇಕು.

ಎಲ್ಲರನ್ನೂ ನಾವು ಸಮಾನವಾಗಿ ಕಾಣುತ್ತೇವೆ. ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮವನ್ನು ಕೈಗೊಳ್ಳಲಾಗುವುದು.

ಸ್ವಚ್ಛತೆಯನ್ನು ನಿರಂತರವಾಗಿ ಮಾಡಲಾಗುತ್ತಿದೆ. ಹಬ್ಬದ ವೇಳೆ ಶೀಘ್ರವಾಗಿ ತ್ಯಾಜ್ಯವನ್ನು ವಿಲೇವಾರಿ ಮಾಡಲು ಪಾಲಿಕೆಯಿಂದ ಕ್ರಮ ಕೈಗೊಳ್ಳಲಾಗುತ್ತದೆ. ಒಂದು ವೇಳೆ ಮಳೆ ಬಂದರೆ ಅದಕ್ಕೂ ಸಹ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು.

Bakrid ಎಸ್​ ಪಿ  ನಿಖಿಲ್ ಬಿ ಹೇಳಿದ ಪ್ರಮುಖ ಪಾಯಿಂಟ್ಸ್

ಜಿಲ್ಲೆಯಲ್ಲಿ ಸೌಹಾರ್ದತೆಯನ್ನು ಮೆರೆದು ಹಬ್ಬಗಳನ್ನು ಆಚರಣೆ ಮಾಡಿಕೊಂಡು ಹೋಗಬೇಕು.

ಹಬ್ಬದ ನೆಪದಲ್ಲಿ ಜಿಲ್ಲೆಯ ಶಾಂತಿ ಕದಡಲು ಯತ್ನಿಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಏನೇ ಸಮಸ್ಯೆ ಬಂದರೂ ಮೊದಲು ಪೊಲೀಸರಿಗೆ ವಿಷಯ ತಿಳಿಸಬೇಕು. 112 ಸಂಖ್ಯೆಗೆ ಕರೆ ಮಾಡಿ ತಿಳಿಸಬೇಕು.

ವಿವಿಧ ಸಂಘಟನೆಗಳ ಮುಖಂಡರು ಸಲಹೆಗಳನ್ನು ನೀಡಿದ್ದೀರಿ, ಅದರಂತೆ ಎಲ್ಲ ರೀತಿಯ ಪೂರ್ವಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಸುರಕ್ಷತೆಗೆ ಅಗತ್ಯವಾದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ 30 ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಿದ್ದು, ತೀವ್ರ ನಿಗಾವಣೆ ನಡೆಸಲಾಗುತ್ತಿದ್ದು, ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ ಅವರು ಬಕ್ರೀದ್ ಹಬ್ಬವನ್ನು ಸೌಹಾರ್ದತೆ ಹಾಗೂ ವಿಜೃಂಭಣೆಯಿಂದ ಆಚರಣೆ ಮಾಡೋಣ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಹಿಂದೂ-ಮುಸ್ಲಿಂ ಧರ್ಮಗಳ ಮುಖಂಡರು ಮಾತನಾಡಿ, ಶಿವಮೊಗ್ಗದ ಸೌಹಾರ್ದ ಪರಂಪರೆಯನ್ನು ಎತ್ತಿಹಿಡಿಯಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವುದಾಗಿ ತಿಳಿಸಿದರು. ಈ ಸಭೆಯಲ್ಲಿ ಎಎಸ್ ಪಿ ಕಾರಿಯಪ್ಪ, ಪಾಲಿಕೆ ಅಧಿಕಾರಿಗಳು, ಜಿಲ್ಲೆಯ ಮುಸ್ಲಿಂ ಮತ್ತು ಹಿಂದೂ ಧರ್ಮದ ಮುಖಂಡರು ಪಾಲ್ಗೊಂಡಿದ್ದರು.

Bakrid 30 Police Checkposts Set Up shimogga

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.