POLITICS

ಮಧು ಬಂಗಾರಪ್ಪಗೆ ಉಪಮುಖ್ಯಮಂತ್ರಿ, ಬೇಳೂರು ಹಾಗೂ ಗವಿಯಪ್ಪಗೆ ಸಚಿವ ಸ್ಥಾನ ನೀಡಲು ಪ್ರವೀಣ್ ಹಿರೇಗೋಡ ಆಗ್ರಹ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

DCM Post Demanded ಶಿವಮೊಗ್ಗ: ರಾಜ್ಯ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚಟುವಟಿಕೆಗಳು ಚುರುಕುಗೊಂಡಿದ್ದು, ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಉಪಮುಖ್ಯಮಂತ್ರಿ ಪಟ್ಟ ನೀಡಬೇಕು ಎಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಒತ್ತಾಯಿಸಿದೆ. ಇದರೊಂದಿಗೆ, ಶಿವಮೊಗ್ಗ ಜಿಲ್ಲೆಯ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಗವಿಯಪ್ಪ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು ಎಂದು ವೇದಿಕೆ ಪ್ರಮುಖರು ಸರ್ಕಾರವನ್ನು ಆಗ್ರಹಿಸಿದ್ದಾರೆ. 

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಪ್ರವೀಣ್ ಹಿರೇಗೋಡ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರು ಜವಾಬ್ದಾರಿ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ಹೊಸ ಸಚಿವ ಸಂಪುಟ ರಚನೆಯ ಪ್ರಕ್ರಿಯೆಗಳು ಸಾಗುತ್ತಿವೆ. ಈ ಸಂದರ್ಭದಲ್ಲಿ, ಕರ್ನಾಟಕದಲ್ಲಿ ಜನಸಂಖ್ಯೆಯ ಆಧಾರದ ಮೇಲೆ ನಾಲ್ಕನೇ ಅತಿ ದೊಡ್ಡ ಸಮುದಾಯವಾಗಿ ಗುರುತಿಸಿಕೊಂಡಿರುವ ಈಡಿಗ ಸಮುದಾಯಕ್ಕೆ ರಾಜಕೀಯವಾಗಿ ಸೂಕ್ತ ಹಾಗೂ ನ್ಯಾಯಸಮ್ಮತ ಪ್ರಾತಿನಿಧ್ಯ ಸಿಗಬೇಕು ಎಂದು ಅವರು ಅಭಿಪ್ರಾಯಪಟ್ಟರು. 

ಶಿಕ್ಷಣ ಸಚಿವರಾಗಿ ಮಧು ಬಂಗಾರಪ್ಪ ಅವರು ಅತ್ಯಂತ  ಯಶಸ್ವಿ ಕಾರ್ಯವೈಖರಿಯನ್ನು ಪ್ರದರ್ಶಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಡಿಸಿಎಂ ಹುದ್ದೆಯನ್ನು ಅಲಂಕರಿಸಲು ಅವಕಾಶ ಮಾಡಿಕೊಡುವ ಮೂಲಕ ಸಮುದಾಯದ ಜನರಿಗೆ ಸೂಕ್ತ ರಾಜಕೀಯ ಮನ್ನಣೆ ನೀಡಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಸುಪುತ್ರರಾದ ಮಧು ಬಂಗಾರಪ್ಪ ಅವರು ಶಿಕ್ಷಣ ಇಲಾಖೆಯಲ್ಲಿ ವಿದ್ಯಾರ್ಥಿ ಹಾಗೂ ಸಾರ್ವಜನಿಕ ಸ್ನೇಹಿಯಾದ ಹಲವಾರು ಪ್ರಮುಖ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದಾರೆ. ಅವರ ಈ ಆಡಳಿತಾತ್ಮಕ ದಕ್ಷತೆ ಹಾಗೂ ಅಪಾರ ಅನುಭವವನ್ನು ಪರಿಗಣಿಸಿ ಅವರಿಗೆ ಉಪಮುಖ್ಯಮಂತ್ರಿ ಜವಾಬ್ದಾರಿಯನ್ನು ವಹಿಸುವುದು ಸೂಕ್ತ ಎಂದರು. ಇದೇ ಸಂದರ್ಭದಲ್ಲಿ, ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನವನ್ನು ನೀಡಬೇಕು ಎಂದು ವೇದಿಕೆ ಒತ್ತಾಯಿಸಿದೆ. ಶಿವಮೊಗ್ಗದ ಬೇಳೂರು ಗೋಪಾಲಕೃಷ್ಣ ಮತ್ತು ಕಲ್ಯಾಣ ಕರ್ನಾಟಕದ ಗವಿಯಪ್ಪ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸರ್ಕಾರ ಸಮಾನತೆ ಮೆರೆಯಬೇಕು ಎಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಆಗ್ರಹಿಸಿದೆ.

DCM Post Demanded for Madhu Bangarappa

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.