ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದಲ್ಲಿ ಪ್ರವೇಶಾತಿ ಆರಂಭ: ಶೇ. 70ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಪಿಯುಸಿ ಶಿಕ್ಷಣ?

ಹಂಚಿಕೊಳ್ಳಿ
WhatsApp Facebook X Telegram
Tunga College Thirthahalli Admission 2026
Tunga College Thirthahalli Admission 2026

Tunga College Thirthahalli ತೀರ್ಥಹಳ್ಳಿ: ಮಲೆನಾಡಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ತೀರ್ಥಹಳ್ಳಿಯ ತುಂಗಾ ವಿದ್ಯಾವರ್ಧಕ ಸಂಘ (ರಿ.) ಸಂಸ್ಥೆಯ ಅಂಗಸಂಸ್ಥೆಗಳಾದ ತುಂಗಾ ಮಹಾವಿದ್ಯಾಲಯ, ತುಂಗಾ ಪದವಿ ಪೂರ್ವ ವಸತಿ ಕಾಲೇಜು ಹಾಗೂ ತುಂಗಾ ರೆಸಿಡೆನ್ಶಿಯಲ್ ಪಿ.ಯು. ಕಾಲೇಜುಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನ ದಾಖಲಾತಿ ಪ್ರಕ್ರಿಯೆಗಳು ಪ್ರಾರಂಭಗೊಂಡಿವೆ. ಆಧುನಿಕ ಸೌಲಭ್ಯಗಳು ಹಾಗೂ ನುರಿತ ಉಪನ್ಯಾಸಕರ ತಂಡದೊಂದಿಗೆ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಲು ಸಂಸ್ಥೆಯು ಸಕಲ ಸಿದ್ಧತೆ ಮಾಡಿಕೊಂಡಿದೆ.

ಓಯ್​ ಸೆಕೆ ಜಾಸ್ತಿ ಅಂತ ಈತರ ಬಿಯರ್​​ ಕುಡಿಯೋದನ್ರ: 3 ತಿಂಗ್ಳಲ್ಲಿ ತೀರ್ಥಳ್ಳಿಲಿ ಬೀರ್​ ಸೇಲ್​ ಆಗಿದ್​ ಎಸ್ಟ್​​ ಗೊತ್ತನ್ರ?

SSLCಯಲ್ಲಿ ಶೇ. 70ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಪಿಯುಸಿ ಶಿಕ್ಷಣ!

ತುಂಗಾ ಪದವಿ ಪೂರ್ವ ವಸತಿ ಕಾಲೇಜಿನ ವಜ್ರಮಹೋತ್ಸವ ವರ್ಷಾಚರಣೆಯ ಅಂಗವಾಗಿ ಸಂಸ್ಥೆಯು ವಿದ್ಯಾರ್ಥಿಗಳಿಗೆ ಭರ್ಜರಿ ಕೊಡುಗೆಯೊಂದನ್ನು ಪ್ರಕಟಿಸಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡಾ 70ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳಿಗೆ ಉಚಿತ ಪಿಯುಸಿ ಶಿಕ್ಷಣ ನೀಡಲಾಗುವುದು ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ. ಗ್ರಾಮೀಣ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸುಲಭವಾಗಿ ಸಿಗಲಿ ಎಂಬ ಉದ್ದೇಶದಿಂದ ಈ ವಿನೂತನ ಯೋಜನೆಯನ್ನು ಜಾರಿಗೆ ತರಲಾಗಿದೆ.

ಲಭ್ಯವಿರುವ ಪ್ರಮುಖ ಕೋರ್ಸ್‌ಗಳ ವಿವರಗಳು

ಸಂಸ್ಥೆಯಲ್ಲಿ ಪಿಯುಸಿ ವಿಭಾಗದ ವಿಜ್ಞಾನದಲ್ಲಿ ಪಿಸಿಎಂಬಿ ಮತ್ತು ಪಿಸಿಎಂಸಿಎಸ್, ವಾಣಿಜ್ಯದಲ್ಲಿ ಹೆಚ್ಇಬಿಎ ಮತ್ತು ಎಸ್ಇಬಿಎ ಹಾಗೂ ಕಲಾ ವಿಭಾಗದಲ್ಲಿ ಹೆಚ್ಇಪಿಎಸ್ ಕೋರ್ಸ್‌ಗಳು ಲಭ್ಯವಿವೆ. ಇದರೊಂದಿಗೆ ಸಿಇಟಿ, ನೀಟ್, ಜೆಇಇ ಹಾಗೂ ಸಿಎ-ಸಿಪಿಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿಯನ್ನು ನೀಡಲಾಗುತ್ತದೆ. ಇನ್ನು ಪದವಿ ವಿಭಾಗದಲ್ಲಿ ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಕನ್ನಡ ಮತ್ತು ಇಂಗ್ಲಿಷ್ ಐಚ್ಛಿಕ ವಿಷಯಗಳನ್ನೊಳಗೊಂಡ ಬಿ.ಎ, ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಗಣಿತಶಾಸ್ತ್ರ ಒಳಗೊಂಡ ಬಿ.ಎಸ್ಸಿ ಮತ್ತು ಕಡ್ಡಾಯ ವಿಷಯಗಳಿರುವ ಬಿ.ಕಾಂ ಹಾಗೂ ಎಐಸಿಟಿಇ ಇಂದ ಮಾನ್ಯತೆ ಪಡೆದ ಬಿ.ಸಿ.ಎ ಕೋರ್ಸ್‌ಗಳಿಗೆ ಪ್ರವೇಶಾತಿ ಮುಕ್ತವಾಗಿದೆ. ಪದವಿ ವಿದ್ಯಾರ್ಥಿಗಳಿಗೆ ಸಿಎಸ್, ಜಾಮ್, ಎಫ್‌ಡಿಎ, ಎಸ್‌ಡಿಎ, ಪಿಸಿ ಹಾಗೂ ವಿಎ ಮುಂತಾದ ಕಾಂಪಿಟೇಟಿವ್ ಎಕ್ಸಾಮ್ಸ್‌ಗಳಿಗೆ ಕೋಚಿಂಗ್ ನೀಡಲಾಗುತ್ತದೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಸುಸಜ್ಜಿತವಾದ ಹಾಸ್ಟೆಲ್ ಸೌಲಭ್ಯ, ಅತ್ಯಾಧುನಿಕ ಪ್ರಯೋಗಾಲಯಗಳು, ಡಿಜಿಟಲ್ ಲೈಬ್ರರಿ, ಕಾಲೇಜು ಬಸ್ ವ್ಯವಸ್ಥೆ, ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳು ಹಾಗೂ ಸ್ಪೋಕನ್ ಇಂಗ್ಲಿಷ್ ಕ್ಲಾಸ್‌ಗಳನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಪ್ರವೇಶಾತಿಗಾಗಿ ಆಸಕ್ತರು ಆನಂದಗಿರಿಯ ಕ್ಯಾಂಪಸ್‌ಗೆ ಭೇಟಿ ನೀಡಬಹುದು ಅಥವಾ ಪಿಯುಸಿಗಾಗಿ 8431312313, 8431416227 ಹಾಗೂ ಪದವಿಗಾಗಿ 8105706613, 9845295451 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

Tunga College Thirthahalli Admission 2026

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor