STATE NEWS

ಶಿವಮೊಗ್ಗ ಯೋಧಾಸ್ ಕ್ರಿಕೆಟ್ ಧಮಾಕಾ: ಜೂನ್ 20 ರಿಂದ ಮಹಾರಾಜ ಟ್ರೋಫಿ ಟಿ20 ಸರಣಿ ಆರಂಭ, ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ!

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಬೆಂಗಳೂರು: ಮುಂಬರುವ ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್ ಪಂದ್ಯಾವಳಿಯ ಬಹುನಿರೀಕ್ಷಿತ 5ನೇ ಆವೃತ್ತಿಯ ಸಂಪೂರ್ಣ ವೇಳಾಪಟ್ಟಿ ಅಧಿಕೃತವಾಗಿ ಹೊರಬಿದ್ದಿದೆ. 150ಕ್ಕೂ ಹೆಚ್ಚು ಪ್ರಮುಖ ಕ್ರಿಕೆಟಿಗರು ಭಾಗವಹಿಸಲಿರುವ ಈ ರೋಚಕ ಟೂರ್ನಿಯು ಜೂನ್ 20 ರಿಂದ ಆರಂಭಗೊಂಡು ಜುಲೈ 12 ರವರೆಗೆ ಕರ್ನಾಟಕದ ಮೂರು ಪ್ರಮುಖ ನಗರಗಳಲ್ಲಿ ಜರುಗಲಿದೆ. ಟೂರ್ನಿ ಆರಂಭಕ್ಕೂ ಮುನ್ನ ಆಟಗಾರರ ಭರ್ಜರಿ ಹರಾಜು ಪ್ರಕ್ರಿಯೆಯು ಜೂನ್ 5 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಸೋನಿ ಟೆನ್ 5 ವಾಹಿನಿಯಲ್ಲಿ ಬೆಳಗ್ಗೆ 9:00 ರಿಂದ ಮಧ್ಯಾಹ್ನ 1:00 ರವರೆಗೆ ನೇರ ಪ್ರಸಾರವಾಗಲಿದೆ.

ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ನೇರ ಸಂದರ್ಶನ: ಐಟಿಐ, ಡಿಪ್ಲೊಮಾ ಪದವೀಧರರಿಗೆ ಸುವರ್ಣಾವಕಾಶ!

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ವತಿಯಿಂದ ಆಯೋಜನೆಗೊಳ್ಳುತ್ತಿರುವ ಈ ಟೂರ್ನಿಯ ಒಟ್ಟು ಪಂದ್ಯಗಳು ಮೈಸೂರು, ಹುಬ್ಬಳ್ಳಿ ಮತ್ತು ಬೆಂಗಳೂರು ನಗರಗಳಲ್ಲಿ ಹಂಚಿಕೆಯಾಗಿವೆ. ಮೈಸೂರು ಹಂತವು ಜೂನ್ 20 ರಿಂದ ಜೂನ್ 26 ರವರೆಗೆ ನಡೆಯಲಿದ್ದು, ಇಲ್ಲಿ ಒಟ್ಟು 12 ಪಂದ್ಯಗಳು ಜರುಗಲಿವೆ. ಉದ್ಘಾಟನಾ ಪಂದ್ಯದಲ್ಲಿ ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಗುಲ್ಬರ್ಗಾ ಮೈಸ್ಟಿಕ್ಸ್ ತಂಡಗಳು ಸೆಣಸಾಡಲಿದ್ದು, ಅಂದೇ ಸಂಜೆ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಶಿವಮೊಗ್ಗ ಯೋಧಾಸ್ ಮತ್ತು ಮೈಸೂರು ವಾರಿಯರ್ಸ್ ಮುಖಾಮುಖಿಯಾಗಲಿವೆ. ಇದೇ ಆವೃತ್ತಿಗೆ ಪದಾರ್ಪಣೆ ಮಾಡುತ್ತಿರುವ ಹೊಸ ಫ್ರಾಂಚೈಸಿ ‘ಕೋಸ್ಟಲ್ ಕಿಂಗ್ಸ್ ಮಂಗಳೂರು’ ಜೂನ್ 21 ರಂದು ಹುಬ್ಳಿ ಟೈಗರ್ಸ್ ವಿರುದ್ಧ ತನ್ನ ಮೊದಲ ಪಂದ್ಯ ಆಡಲಿದೆ.

ಇದಾದ ಬಳಿಕ ಟೂರ್ನಿಯು ಜೂನ್ 27 ರಿಂದ ಜುಲೈ 3 ರವರೆಗೆ ಹುಬ್ಬಳ್ಳಿ ಹಂತಕ್ಕೆ ಪ್ರವೇಶಿಸಲಿದ್ದು, ಅಲ್ಲಿಯೂ ಸಹ 12 ಪಂದ್ಯಗಳು ಆಯೋಜನೆಗೊಂಡಿವೆ. ಅಂತಿಮವಾಗಿ ಜುಲೈ 5 ರಿಂದ ಜುಲೈ 12 ರವರೆಗೆ ಬೆಂಗಳೂರಿನಲ್ಲಿ ಕ್ವಾಲಿಫೈಯರ್ 1, ಎಲಿಮಿನೇಟರ್, ಕ್ವಾಲಿಫೈಯರ್ 2 ಮತ್ತು ಮಹಾ ಫೈನಲ್ ಸೇರಿದಂತೆ ಒಟ್ಟು 10 ಪ್ರಮುಖ ಪಂದ್ಯಗಳು ಜರುಗಲಿವೆ. ಆರೂ ಫ್ರಾಂಚೈಸಿಗಳು ಪ್ರತಿಷ್ಠಿತ ಪ್ರಶಸ್ತಿಗಾಗಿ ಕಠಿಣ ಪೈಪೋಟಿ ನಡೆಸಲಿದ್ದು, ಕ್ರೀಡಾಭಿಮಾನಿಗಳಿಗೆ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಭರಪೂರ ಕ್ರಿಕೆಟ್ ರಸದೌತಣ ಸಿಗಲಿದೆ.

Maharaja Trophy T20 Season 5 Schedule

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY