ಶಿವಮೊಗ್ಗ: 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

ಶಿವಮೊಗ್ಗ: ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದ್ದ ದರೋಡೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಿವಮೊಗ್ಗ ಟೌನ್ ನಿವಾಸಿ ಜಾಫರ್ ಬೇಗ್ ಎಂದು ಗುರುತಿಸಲಾಗಿದೆ.

indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು 

ಈತ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಉಷಾ ನರ್ಸಿಂಗ್ ಹೋಮ್ ಬಳಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದನು. ಈ ಸಂಬಂಧ ಈ ಹಿಂದೆ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯಾಗಿದ್ದ ಜಾಫರ್ ಬೇಗ್ ಕಳೆದ 8 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಆರೋಪಿಯ ಗೈರುಹಾಜರಿಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯವು ಆತನ ವಿರುದ್ಧ ವಾರಂಟ್‌ ಅನ್ನು ಹೊರಡಿಸಿತ್ತು. 

ನ್ಯಾಯಾಲಯದ ಆದೇಶದ ಬೆನ್ನಲ್ಲೇ ಜಯನಗರ ಪೊಲೀಸ್ ಠಾಣೆಯ ಪಿಐ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಕೊನೆಗೂ ಆರೋಪಿತನನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

Jayanagar Police Arrest Robbery Accused

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor