ಶಿವಮೊಗ್ಗ: ವಿನೋಬನಗರದ ಮನೆ ಕಳವು ಪ್ರಕರಣದ ಆರೋಪಿ ಬಂಧನ; ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಶ

ಹಂಚಿಕೊಳ್ಳಿ
WhatsApp Facebook X Telegram
Shimoga Vinobanagar House Theft Case Solved

ಶಿವಮೊಗ್ಗ: ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣವೊಂದನ್ನು ಭೇದಿಸುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿರುವ ಅಧಿಕಾರಿಗಳು, ಆತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಒಡವೆಗಳನ್ನು ರಿಕವರಿ ಮಾಡಿಕೊಂಡಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

ಘಟನೆ ವಿವರ

ಕಳೆದ 2025ರ ಆಗಸ್ಟ್ 3 ರಿಂದ ಆಗಸ್ಟ್ 10ರ ನಡುವಿನ ಅವಧಿಯಲ್ಲಿ ವಿನೋಬನಗರದ ಹುಡ್ಕೋ ಕಾಲೋನಿಯಲ್ಲಿರುವ ಮನೆಯೊಂದರಲ್ಲಿ 12 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ಸಂತ್ರಸ್ತೆ, ಕಾಶಿಪುರ ಲಕ್ಷ್ಮೀಪುರ ಬಡಾವಣೆಯ ನಿವಾಸಿಯೊಬ್ಬರು ವಿನೋಬನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದರು. ಹಾಗೆಯೇ ಈ ಪ್ರಕರಣವನ್ನು ಬೇಧಿಸಲು ವಿಶೇಷ ತಂಡವನ್ನು ರಚಿಸಿದ್ದರು.

ಇದೀಗ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದು,  ಶಿವಮೊಗ್ಗ ತಾಲ್ಲೂಕಿನ ರಟ್ಟೆಹಳ್ಳಿ ಗ್ರಾಮದ ನಿವಾಸಿ ಲೋಹಿತ್ ಕುಮಾರ್ ಬಿ (29 ವರ್ಷ) ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದಕಳವು ಮಾಡಲಾಗಿದ್ದ ಒಟ್ಟು 10.7 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ ಸುಮಾರು 1,50,000 ರೂ. ಎಂದು ಅಂದಾಜಿಸಲಾಗಿದೆ.

Shimoga Vinobanagar House Theft Case Solved

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor