ಉಡಾನ್ ಯೋಜನೆಯಡಿ ಶಿವಮೊಗ್ಗ ವಿಮಾನ ನಿಲ್ದಾಣ ಪುನಶ್ಚೇತನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಯತ್ನ?

ಹಂಚಿಕೊಳ್ಳಿ
WhatsApp Facebook X Telegram
Shivamogga Airport by Raghavendra Slams Congress over Women's Bill
Shivamogga Airport by Raghavendra Slams Congress over Women's Bill

ಶಿವಮೊಗ್ಗ: ಶಿವಮೊಗ್ಗದ ಇಂಡಿಗೋ ಹಾಗೂ ಸ್ಪೈಸ್‌ಜೆಟ್ ಸಂಸ್ಥೆಗಳ ವಿಮಾನ ಹಾರಾಟ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಉಡಾನ್ ಯೋಜನೆಯ ವ್ಯಾಪ್ತಿಗೆ ತಂದು ವಿಮಾನ ಹಾರಾಟವನ್ನು ಮರುಚಾಲನೆಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು  ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ.

ಶಿವಮೊಗ್ಗ:  ಜೂನ್ 5 ಮತ್ತು ಜೂನ್ 6 ರಂದು ನಗರದ ಹಲವೆಡೆ ಪವರ್ ಕಟ್

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದರು, ಕಲ್ಯಾಣ ಕರ್ನಾಟಕ ಭಾಗದ ಬೀದರ್ ಹಾಗೂ ಕಲಬುರಗಿ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಕೈಗೊಂಡ ಮಾದರಿಯಲ್ಲೇ ಶಿವಮೊಗ್ಗಕ್ಕೂ ವಿಶೇಷ ಪ್ಯಾಕೇಜ್ ಘೋಷಿಸುವಂತೆ ರಾಜ್ಯ ಸರ್ಕಾರವನ್ನು ಕೋರಲಾಗಿತ್ತು. ಆದರೆ, ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಆಮೆಗತಿಯಲ್ಲಿ ಸಾಗುತ್ತಿದ್ದು, ಸೂಕ್ತ ಆರ್ಥಿಕ ನೆರವು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ಪ್ರಾದೇಶಿಕ ಸಂಪರ್ಕ ಯೋಜನೆಗೆ ಸೇರ್ಪಡೆಗೊಳಿಸಲು ಈಗಾಗಲೇ ಅರ್ಜಿ ಸಲ್ಲಿಕೆಯಾಗಿದ್ದು, ವಿಮಾನ ಸೇವೆಗಳ ಪುನಶ್ಚೇತನಕ್ಕೆ ನಿರಂತರವಾಗಿ  ಪ್ರಯತ್ನಮಾಲಾಗುವುದು ಎಂದರು.

Shivamogga Airport MP Pushes for UDAN Scheme

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor